LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದಿಂದ ಬಿಜೆಪಿ ಸರ್ಕಾರ ಕಿತ್ತೆಸೆಯುತ್ತೇವೆ: ಮಮತಾ ಬ್ಯಾನರ್ಜಿ ಗುಡುಗು

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಶೀಘ್ರದಲ್ಲೇ ಅದನ್ನು “ದೆಹಲಿಯಲ್ಲಿ ಅಧಿಕಾರದಿಂದ ತೆಗೆದುಹಾಕಲಾಗುವುದು” ಎಂದು ಹೇಳಿದ್ದಾರೆ,

ತಮ್ಮ ನಿವಾಸದಲ್ಲಿ ನಡೆದ ಟಿಎಂಸಿ ಶಾಸಕರ ಸಭೆಯಲ್ಲಿ ಮಾತನಾಡಿದ ಮಮತಾ, ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತ ಸಮುದಾಯಗಳು ಮತ್ತು ರಸ್ತೆಬದಿಯ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.

“ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲಾಗುತ್ತಿದೆ. ಅಂಗಡಿಗಳನ್ನು ಕೆಡವಲಾಗುತ್ತಿದೆ”.ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಚುನಾವಣೆಯ ನಂತರದ ಹಿಂಸಾಚಾರ ಮತ್ತು ಅಕ್ರಮ ಅತಿಕ್ರಮಣ ವಿರುದ್ಧ ಕ್ರಮವನ್ನು ಉಲ್ಲೇಖಿಸಿ ಹೇಳಿದರು.

“ಈ ಸರ್ಕಾರ ನಮ್ಮ ಸಾಂವಿಧಾನಿಕ ವಿಚಾರಗಳು ಮತ್ತು ಮೌಲ್ಯಗಳನ್ನು ಹಾಳು ಮಾಡುತ್ತಿದೆ” ಎಂದು ಸುವೇಂದು ಅಧಿಕಾರಿ ನೇತೃತ್ವದ ರಾಜ್ಯ ಸರ್ಕಾರವನ್ನು ಟೀಕಿಸುತ್ತಾ ಮಮತಾ ಹೇಳಿದ್ದಾರೆ. ದೇಶದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಮುನ್ನಡೆಸುತ್ತಿರುವ ಬಿಜೆಪಿ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ. “ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕಲಾಗುವುದು” ಎಂದು ಹೇಳಿದ್ದಾರೆ.

ವ್ಯಾಪಾರಿಗಳನ್ನು ಬಲವಂತವಾಗಿ ಹೊರಹಾಕುವುದರ ವಿರುದ್ಧ ಮತ್ತು “ಬಿಜೆಪಿಯ ಬುಲ್ಡೋಜರ್ ಸಂಸ್ಕೃತಿ” ವಿರುದ್ಧ ಟಿಎಂಸಿ ಮೇ 21 ರಂದು ಸರಣಿ ಪ್ರತಿಭಟನೆಗಳನ್ನು ಪ್ರಾರಂಭಿಸಲಿದೆ. ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಮೂರು ಸ್ಥಳಗಳಲ್ಲಿ – ಬ್ಯಾಲಿಗಂಜ್ ಬಳಿ, ಹೌರಾ ಜಂಕ್ಷನ್ ಮತ್ತು ಸೀಲ್ಡಾ ರೈಲು ನಿಲ್ದಾಣದಲ್ಲಿ ಪ್ರತಿಭಟನೆಗಳು ನಡೆಯಲಿವೆ. ಈ ಬಗ್ಗೆ ಚರ್ಚಿಸಲು ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ