LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈ ಒಂದು ಗಿಡ ನಿಮ್ಮ ಮನೆಯಲ್ಲಿದ್ದರೆ ಸಾಕು ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ !

ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಮಹತ್ವವಿದೆ. ಆಧ್ಯಾತ್ಮಿಕವಾಗಿ ಇದಕ್ಕೆ ವಿಶೇಷ ಸ್ಥಾನವಿದ್ದು, ಮನೆಯಲ್ಲಿ ಯಾವುದೇ ಸಣ್ಣ ಶುಭಕಾರ್ಯ ನಡೆದರೂ ವೀಳ್ಯದೆಲೆ ಕಡ್ಡಾಯವಾಗಿರುತ್ತದೆ.ವಾಸ್ತು ಶಾಸ್ತ್ರದ ಪ್ರಕಾರ, ಆಧ್ಯಾತ್ಮಿಕವಾಗಿ ಇದು ಎಲ್ಲರಿಗೂ ಒಳಿತನ್ನು ಮಾಡುತ್ತದೆ. ಮುಖ್ಯವಾಗಿ ಮನೆಯ ಮುಂದೆ ವೀಳ್ಯದೆಲೆ ಗಿಡವಿದ್ದರೆ ಅದೃಷ್ಟ ಕೂಡಿಬರುತ್ತದೆ. ಅಲ್ಲದೆ, ಇದರಿಂದ ವಾಸ್ತು ದೋಷಗಳು ನಿವಾರಣೆಯಾಗುತ್ತವೆ ಎಂದು ಹೇಳಲಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ, ವೀಳ್ಯದೆಲೆ ಗಿಡವನ್ನು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಎಲ್ಲವೂ ಒಳಿತಾಗುತ್ತದೆ. ಯಾರ ಮನೆಯಲ್ಲಿ ವೀಳ್ಯದೆಲೆ ಗಿಡವು ಹಸಿರಾಗಿ, ಹುಲುಸಾಗಿ ಬೆಳೆಯುತ್ತದೆಯೋ ಅವರಿಗೆ ಶನಿ ದೋಷ ಇರುವುದಿಲ್ಲ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ನಂಬಲಾಗಿದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗಿ, ಸಕಾರಾತ್ಮಕ ಶಕ್ತಿಯು ಪ್ರವೇಶಿಸುತ್ತದೆ. ವೀಳ್ಯದೆಲೆ ಗಿಡವು ಮನೆಯಲ್ಲಿ ಇರುವುದು ಆರ್ಥಿಕ ಸಮಸ್ಯೆಗಳನ್ನು ನಿವಾರಿಸಿ, ಆದಾಯ ಹೆಚ್ಚಾಗಲು ಮತ್ತು ಸಂಪತ್ತು ವೃದ್ಧಿಯಾಗಲು ಸಹಕರಿಸುತ್ತದೆ.

ಮನೆಯಲ್ಲಿ ವೀಳ್ಯದೆಲೆ ಗಿಡವಿದ್ದರೆ ಅಲ್ಲಿ ಆಂಜನೇಯ ಸ್ವಾಮಿಯ ಆಶೀರ್ವಾದವಿರುತ್ತದೆ ಎಂದು ಪಂಡಿತರು ಹೇಳುತ್ತಾರೆ. ಆದ್ದರಿಂದ, ಯಾವ ಮನೆಯಲ್ಲಿ ಈ ಗಿಡ ಇರುತ್ತದೆಯೋ, ಆ ಮನೆಯ ಮೇಲೆ ದೃಷ್ಟಿ ದೋಷ ಇರುವುದಿಲ್ಲ. ಜೊತೆಗೆ ಲಕ್ಷ್ಮೀದೇವಿಯ ಕೃಪೆ ಲಭಿಸುತ್ತದೆ. ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ. ಸಾಲದ ಹೊರೆ ಕಡಿಮೆಯಾಗಿ, ಮನೆಯಲ್ಲಿ ಸಂತೋಷದ ವಾತಾವರಣ ನೆಲೆಸುತ್ತದೆ.

ಯಾವ ದಿಕ್ಕಿನಲ್ಲಿ ನೆಡಬೇಕು? ಈ ಗಿಡವನ್ನು ಮನೆಯಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿ ಮಾತ್ರ ನೆಡಬೇಕು. ಏಕೆಂದರೆ ಈ ದಿಕ್ಕಿನಲ್ಲಿ ಸೂರ್ಯನ ಬೆಳಕು ಚೆನ್ನಾಗಿ ಬಿದ್ದು, ಗಿಡ ಹುಲುಸಾಗಿ ಬೆಳೆಯುತ್ತದೆ. ಗಿಡ ಎಷ್ಟು ಹಸಿರಾಗಿ ಮತ್ತು ಹುಲುಸಾಗಿ ಬೆಳೆಯುತ್ತದೆಯೋ, ಅಷ್ಟು ಸಂಪತ್ತು ಮನೆಗೆ ಬರುತ್ತದೆ ಎಂಬ ನಂಬಿಕೆಯಿದೆ.

ಈ ಸುದ್ದಿಯಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳ ಮೇಲೆ ಆಧಾರಿತವಾಗಿದೆ. ಓದುಗರ ಆಸಕ್ತಿಗಾಗಿ ವಿವಿಧ ಪಂಡಿತರ ಸೂಚನೆಗಳು ಮತ್ತು ಅವರು ತಿಳಿಸಿದ ಅಂಶಗಳ ಆಧಾರದ ಮೇಲೆ ಇದನ್ನು ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ