LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈಕೊಟ್ಟ ಯುವತಿ: ಹೈಟೆನ್ಶನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಆನೇಕಲ್: ಪ್ರೀತಿಸಿದ ಹುಡುಗಿ ಕೈಕೊಟ್ಟ ಕಾರಣಕ್ಕೆ ಮನನೊಂದ ಯುವಕ ಹೈಟೆನ್ಶನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಚಿನ್ನಯ್ಯನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಚಿನ್ನಯ್ಯನಪಾಳ್ಯದ ನಿವಾಸಿ ಸೋಮಶೇಖರ್ ಎಂಬಾತ ವಿದ್ಯುತ್ ಕಂಬದ ಮೇಲೇರಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಈತನ ಹುಚ್ಚಾಟದಿಂದಾಗಿ ಇಡೀ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಂಟೆಗಟ್ಟಲೆ ಆತಂಕದಲ್ಲಿ ಕಳೆಯುವಂತಾಯಿತು.

ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ಯುವತಿಯು ಮದುವೆಗೆ ನಿರಾಕರಿಸಿ, ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು ಮುಂದಾಗಿದ್ದಾಳೆ. ಇದರಿಂದ ನೊಂದ ಸೋಮಶೇಖರ್, ಮೊದಲು ತನ್ನ ಮನೆಯ ಮೇಲ್ಛಾವಣಿಯ ಶೀಟ್‌ಗಳನ್ನು ಒಡೆದು ದಾಂಧಲೆ ನಡೆಸಿದ್ದಾನೆ. ಅದಾದ ಬಳಿಕವೂ ಆಕ್ರೋಶ ಕಡಿಮೆಯಾಗಿಲ್ಲ. ಮನೆ ಸಮೀಪದಲ್ಲೇ ಇದ್ದ ಭಾರಿ ಗಾತ್ರದ ಹೈಟೆನ್ಷನ್ ವಿದ್ಯುತ್ ಕಂಬದ ಮೇಲೇರಿದ್ದಾನೆ. ‘ತಾನು ಪ್ರೀತಿಸಿದ ಹುಡುಗಿ ಸ್ಥಳಕ್ಕೆ ಬರುವವರೆಗೂ ತಾನು ಯಾವುದೇ ಕಾರಣಕ್ಕೂ ಕೆಳಗೆ ಇಳಿಯುವುದಿಲ್ಲ’ ಎಂದು ಪಟ್ಟು ಹಿಡಿದಿದ್ದಾನೆ.

ಆನೇಕಲ್ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮನವೊಲಿಕೆಗೆ ಯತ್ನಿಸಿದರೂ ಯುವಕ ಕೆಳಗೆ ಇಳಿದಿಲ್ಲ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಎಷ್ಟೇ ಮನವೊಲಿಸಿದರೂ ಯುವಕ ಮಾತ್ರ ಕೆಳಗಿಳಿಯಲು ಒಪ್ಪದೆ ಹಠ ಹಿಡಿದಿದ್ದಾನೆ. ಕಂಬದಲ್ಲಿ ಹೈವೋಲ್ಟೇಜ್ ವಿದ್ಯುತ್ ಪ್ರವಹಿಸುವ ಆಪಾಯವಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ