LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಗುಡ್ ನ್ಯೂಸ್: ಮುಂಗಾರು ಹಂಗಾಮಿಗೆ ಅಗತ್ಯ ಬಿತ್ತನೆ ಬೀಜ ಲಭ್ಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯವಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜಗಳನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆಗೆ ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ 8960 ಕ್ವಿಂಟಲ್ ಸೋಯಾಬಿನ್ 1344 ಕ್ವಿಂಟಲ್ ಶೇಂಗಾ ಬೀಜಕ್ಕೆ ಅಂದಾಜು ಬೇಡಿಕೆ ಇದ್ದು ರಾಜ್ಯಮಟ್ಟದಲ್ಲಿಯೂ ಸೋಯಾಬಿನ್ ಬೀಜಕ್ಕೆ 1.80 ಲಕ್ಷ ಕ್ವಿಂಟಲ್ ಬೇಡಿಕೆ ಇದೆ. 2.09 ಲಕ್ಷ ಕ್ವಿಂಟಲ್ ದಾಸ್ತಾನು ಇದೆ. 70,000 ಕ್ವಿಂಟಲ್ ಶೇಂಗಾ ಬೀಜಕ್ಕೆ ಬೇಡಿಕೆ ಇದ್ದು, 74,000 ಕ್ವಿಂಟಲ್ ದಾಸ್ತಾನು ಇದೆ. ಒಟ್ಟಾರೆ ರಾಜ್ಯದಲ್ಲಿ ಎಲ್ಲಾ ಬೆಳೆಗಳ 4.71 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದ್ದು 5.46 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲವೆಂದು ಕೃಷಿ ಸಚಿವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ