LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವನಿಧಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಕೌಶಲ್ಯ ಉದ್ಯಮಶೀಲತೆ ತರಬೇತಿ ಕಡ್ಡಾಯ

ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಫಲಾನುಭವಿಗಳು ಕಡ್ಡಾಯವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಬೇಕು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಹಾಗೂ ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಜಿಲ್ಲೆಯ ಜಿಟಿಟಿಸಿ, ಸಿಡಾಕ್, ಸರ್ಕಾರಿ ಐಟಿಐಗಳಲ್ಲಿ ಯುವನಿಧಿ ಪ್ಲಸ್ ಅಡಿಯಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ.

ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಅಡಿಯಲ್ಲಿ ತರಬೇತಿ ಪಡೆಯುತ್ತಿರುವುದಿಲ್ಲ. ಆದ ಕಾರಣ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು https://skillmission.karnataka.gov.in/app/registration_type ಲಿಂಕ್‌ ನ್ನು ಉಪಯೋಗಿಸಿ ತುರ್ತಾಗಿ ನೋಂದಾಯಿಸಿಕೊಂಡು ಯುವನಿಧಿ ಪ್ಲಸ್ ಅಡಿಯಲ್ಲಿ ತರಬೇತಿ ಪಡೆದು ಈ ಸುವರ್ಣಾಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೆ.ಜಿ.ಐ.ಡಿ ಕಚೇರಿ ಎದುರುಗಡೆ, ಜಿಲ್ಲಾಡಳಿತ ಭವನ ಕೊಪ್ಪಳ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು. ಪ್ರಸ್ತುತ ಯುವನಿಧಿ ಫಲಾನುಭವಿಗಳು ಯುವನಿಧಿ-ಪ್ಲಸ್ ಕಾರ್ಯಕ್ರಮದಡಿ ತರಬೇತಿ ಪಡೆದರೂ ಸರ್ಕಾರವು ನಿಗದಿಪಡಿಸಿರುವ ಅವಧಿಯವರೆಗೆ ನಿರುದ್ಯೋಗ ಭತ್ಯೆ ಪಡೆಯಲು ಯಾವುದೇ ಅಡಚಣೆಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ