ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಇಟಿ ಫಲಿತಾಂಶ ಪ್ರಕಟಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸಿದ್ಧತೆ ಆರಂಭಿಸಿದ್ದು, ಮುಂದಿನ ವಾರಾಂತ್ಯದೊಳಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2026 ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಿದೆ. ಮುಂದಿನ ವಾರಾಂತ್ಯದಲ್ಲಿ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಭ್ಯರ್ಥಿಗಳ ಅಂಕಗಳು ಈಗಾಗಲೇ ಪ್ರಾಧಿಕಾರಕ್ಕೆ ಲಭ್ಯವಾಗಿವೆ. ಪರೀಕ್ಷೆ -2ರ ಫಲಿತಾಂಶದಲ್ಲಿ ಉತ್ತೀರ್ಣರಾದ ಸಿಇಟಿ ಅಭ್ಯರ್ಥಿಗಳ ಅಂಕಗಳು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆದವರ ಸುಧಾರಿತ ಫಲಿತಾಂಶದ ಅಂಕಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಾಧಿಕಾರಕ್ಕೆ ಒಂದೆರಡು ದಿನದಲ್ಲಿ ಸಲ್ಲಿಸಲಿದೆ. ಬಹುತೇಕ ಮುಂದಿನ ವಾರದ ವೇಳೆಗೆ ಫಲಿತಾಂಶ ಪ್ರಕಟಿಸಲು ಪ್ರಾಧಿಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.