LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿ ನಾಯಿಗಳ ನಿಯಂತ್ರಣಕ್ಕೆ ಪುರಸಭೆ ಕ್ರಮ : ಸಾರ್ವಜನಿಕರಿಗೆ ಮಾರ್ಗಸೂಚಿ ಪ್ರಕಟ

ಶಿವಮೊಗ್ಗ : ಶಿಕಾರಿಪುರ ಪಟ್ಟಣದಲ್ಲಿ ಬೀದಿ ನಾಯಿಗಳ ನಿಯಂತ್ರಣ ಹಾಗೂ ಇತ್ತೀಚೆಗೆ ನಡೆದ ನಾಯಿ ಕಡಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶದಂತೆ, ಬೀದಿ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರಚಿಕಿತ್ಸೆ(ಎಬಿಸಿ) ನಡೆಸಿ, ಆರೈಕೆ ಮಾಡಿದ ನಂತರ ಅವುಗಳನ್ನು ಯಾವ ಸ್ಥಳದಿಂದ ಹಿಡಿಯಲಾಗಿದ್ದಿತೋ ಅದೇ ಸ್ಥಳಕ್ಕೆ ಮರಳಿ ಬಿಡಲು ನಿಯಮಗಳನ್ನು ರೂಪಿಸಲಾಗಿದೆ.

ಇದರನ್ವಯ ಶಿಕಾರಿಪುರ ಪುರಸಭೆಯಿಂದ 2024-25ನೇ ಸಾಲಿನಲ್ಲಿ 711 ಬೀದಿ ನಾಯಿಗಳಿಗೆ ಹಾಗೂ 2025-26ನೇ ಸಾಲಿನಲ್ಲಿ 110 ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಪ್ರಸಕ್ತ 2026-27ನೇ ಸಾಲಿನಲ್ಲಿಯೂ ಎಬಿಸಿ ಪ್ರಕ್ರಿಯೆ ನಡೆಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪ್ರಸ್ತುತ ಇದು ಅನುಷ್ಠಾನದ ಹಂತದಲ್ಲಿದೆ ಎಂದು ಪುರಸಭೆ ತಿಳಿಸಿದೆ.

ಪರಿಹಾರ ವಿತರಣೆ:

ದಿನಾಂಕ 21-05-2026 ರಂದು ಶಿಕಾರಿಪುರ ಪಟ್ಟಣದ ಚನ್ನಕೇಶವನಗರದ 6ನೇ ಕ್ರಾಸ್ ಹಾಗೂ ವಿನಾಯಕನಗರದ 8ನೇ ಕ್ರಾಸ್‌ನಲ್ಲಿ ಇಬ್ಬರು ಮಕ್ಕಳಿಗೆ ಬೀದಿ ನಾಯಿ ಕಚ್ಚಿದ ಪ್ರಕರಣ ನಡೆದಿದೆ. ಈ ಹಿನ್ನೆಲೆಯಲ್ಲಿ ಪುರಸಭೆಯು ತಕ್ಷಣವೇ ಸ್ಪಂದಿಸಿ, ನೊಂದ ಮಕ್ಕಳ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದೆ. ಅಲ್ಲದೆ, ಮಕ್ಕಳಿಗೆ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದು, ಸರ್ಕಾರದ ಆದೇಶದಂತೆ ತಲಾ 5,000/- ರೂ.ಗಳ ಪರಿಹಾರ ಧನವನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು:

ಬೀದಿ ನಾಯಿಗಳ ಹಾವಳಿ ಮತ್ತು ನಾಯಿ ಕಡಿತದ ಪ್ರಕರಣಗಳಿಂದ ಮುಕ್ತಿ ಪಡೆಯಲು ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಆಹಾರ ಪದಾರ್ಥಗಳನ್ನು ಹಾಕಬಾರದು.

ಪುರಸಭೆಯಿಂದ ನಿಗದಿಪಡಿಸಲಾದ ನಿಗದಿತ ಸ್ಥಳಗಳಲ್ಲಿ ಮಾತ್ರ ಆಹಾರ ಪದಾರ್ಥಗಳನ್ನು ಹಾಕಬೇಕು.

ಸಣ್ಣ ಮಕ್ಕಳು ಮತ್ತು ವಯೋವೃದ್ಧರನ್ನು ಒಂಟಿಯಾಗಿ ಬಿಡದೆ, ಸುರಕ್ಷಿತವಾಗಿ ನೋಡಿಕೊಳ್ಳಬೇಕು.

ಸಾಕು ನಾಯಿಗಳ ಮಾಲೀಕರು ಶಿಕಾರಿಪುರ ಪುರಸಭೆಯಿಂದ ಕಡ್ಡಾಯವಾಗಿ ಅನುಮತಿ (ಲೈಸೆನ್ಸ್) ಪಡೆಯಬೇಕು.

ಈ ಮೇಲ್ಕಂಡ ನಿಯಮಗಳನ್ನು ಪಾಲಿಸಿ, ನಾಯಿ ಕಡಿತದ ಪ್ರಕರಣ ಮುಕ್ತ ಪಟ್ಟಣವನ್ನಾಗಿಸಲು ಸಾರ್ವಜನಿಕರು ಶಿಕಾರಿಪುರ ಪುರಸಭೆಯೊಂದಿಗೆ ಕೈಜೋಡಿಸಬೇಕಾಗಿ ಶಿಕಾರಿಪುರ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ