LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕೆದಾಟು ಯೋಜನೆ: ಭೂಮಿ ಪೂಜೆಗೆ ಕರ್ನಾಟಕ ಸರ್ಕಾರ ಸಿದ್ಧತೆ: ಡಿಪಿಆರ್ ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ವಿಜಯ್

ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಭೂಮಿ ಪೂಜೆಗೆ ಸರ್ಕಾರ ಸಿದ್ಧತೆ ನಡೆಸಿರುವುದಕ್ಕೆ ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೇ ವಿಚಾರವಾಅಗಿ ಪ್ರಧಾಅನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ವಿಜಯ್, ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಸುದೀರ್ಘ ಪತ್ರ ಬರೆದಿರುವ ವಿಜಯ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮೇಕೆದಾಟು ವಿಚಾರವಾಗಿ ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳು ಹಾಗೂ ಭೂಮಿ ಪೂಜೆಯ ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ ಎಂದು ಉಲ್ಲೇಖಿಸಿದ್ದಾರೆ.

ತಮಿಳುನಾಡು ಒಪ್ಪಿಗೆಯನ್ನು ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಬೇಕು. ಇದರೊಂದಿಗೆ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (DPR) ತಕ್ಷಣವೇ ತಿರಸ್ಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗದ (CWC) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ