ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ ವ್ಯೂವ್ ಅನ್ನು ಜೂನ್ 2 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್ ವ್ಯೂವ್ ನಲ್ಲಿ ಕೊಪ್ಪಳದ ಪ್ರತಿಷ್ಠಿತ ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ಐ.ಟಿ.ಐ ಫಿಟ್ಟರ್, ಐ.ಟಿ.ಐ ವೆಲ್ಡರ್, ಐ.ಟಿ.ಐ ಮೆಕ್ಯಾನಿಕ್, ಐ.ಟಿ.ಐ ಇಲೆಕ್ಟ್ರಿಷಿಯನ್ ಅಥವಾ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಇತರೆ ಪದವಿ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಆಸಕ್ತ 18 ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರೆಸ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ ವ್ಯೂವ್ ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಉದ್ಯೋಕಾಂಕ್ಷಿಗಳು https://forms.gle/uJnyp39f6SRzKqhKA ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.