LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾದರಿ ನಡೆ, ಅವರ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯ್ತು: ಶಿವಸೇನೆ ನಾಯಕ ಸಂಜಯ್ ರಾವತ್

ಮುಂಬೈ: ಸಿದ್ದರಾಮಯ್ಯ ಅವರ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯಿತು ಎಂದು ಮಹಾರಾಷ್ಟ್ರ ಶಿವಸೇನೆ(ಯುಬಿಟಿ) ರಾಜ್ಯಸಭೆ ಸಂಸದ ಸಂಜಯ್ ರಾವತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿದರು. ಭಾರತೀಯ ರಾಜಕೀಯದಲ್ಲಿ ಇಂತಹ ಸುಗಮ ಅಧಿಕಾರ ವರ್ಗಾವಣೆ ತೀರಾ ಅಪರೂಪ ಎಂದು ಹೇಳಿದ್ದಾರೆ.

ಕರ್ನಾಟಕದ ಹಿರಿಯ ನಾಯಕರಾದ ಸಿದ್ದರಾಮಯ್ಯ ಅವರದ್ದು ಮಹಾರಾಷ್ಟ್ರದ ವಸಂತದಾದಾ ಪಾಟೀಲ್ ಮತ್ತು ವಸಂತರಾವ್ ನಾಯಕ್ ಅವರಂತಹ ನಾಯಕತ್ವ. ಹಿರಿಯ ನಾಯಕರು ಸಾಮಾನ್ಯವಾಗಿ ತಮ್ಮ ಹುದ್ದೆಗಳನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಆದರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಆದೇಶ ಪಾಲಿಸಿ ರಾಜೀನಾಮೆ ನೀಡಿದ್ದಾರೆ. ಭಾರತೀಯ ರಾಜಕೀಯದಲ್ಲಿ ನಾನು ಇದನ್ನು ನೋಡಿದ್ದು ಅಪರೂಪ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ ಸಿದ್ದರಾಮಯ್ಯ ನಡೆಸಿದ ಸುಗಮ ಅಧಿಕಾರ ಹಸ್ತಾಂತರ ಅತ್ಯಂತ ಅಪರೂಪ. ಯಾವುದೇ ಹಠ ಹಿಡಿಯದೇ ಮುಖ್ಯಮಂತ್ರಿಯಂತಹ ಸ್ಥಾನದಿಂದ ಕೆಳಗಿಳಿಯುವ ಮೂಲಕ ಅಪರೂಪದ ಮಾದರಿ ಹಾಕಿ ಕೊಟ್ಟಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧತೆ ತೋರಿದ್ದಾರೆ. ಇದು ರಾಜಕೀಯ ಪ್ರೌಢಿಮೆಯ ಸಂಕೇತ. ಸಿದ್ದರಾಮಯ್ಯನವರ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಗಿದೆ ಎಂದು ಸಂಜಯ್ ರಾವತ್ ಶ್ಲಾಘಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ