LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲೇಜು ವಿದ್ಯಾರ್ಥಿಗಳಿಗೆ ನಗದು ಬಹುಮಾನ : ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ (ಪಿಯುಸಿ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ – ಪಿಜಿ) ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ನಗದು ಬಹುಮಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ twd.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿದ ನಂತರ, ಅಗತ್ಯವಿರುವ ಎಲ್ಲಾ ಪೂರಕ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿ (ಅಟೆಸ್ಟೆಡ್), ತಾಲ್ಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ (ವಾಲ್ಮೀಕಿ ಭವನ, ನಲ್ಲಚೇರುವು ಪ್ರದೇಶ, ಬಳ್ಳಾರಿ) ಇಲ್ಲಿಗೆ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9110224569 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಾಲ್ಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಸಮುದಾಯಗಳ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ (ಪಿಯುಸಿ ಸಮಾನಾಂತರ ಕೋರ್ಸ್ ಗಳಾದ ಡಿಪ್ಲೋಮಾ, ಐಟಿಐ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಅಧಿಕೃತ ಪೋರ್ಟಲ್ https://shp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ: ಪ್ರವರ್ಗ-1, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವಾರ್ಷಿಕ ಆದಾಯ ರೂ. 2.50 ಲಕ್ಷ ಒಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ವಾರ್ಷಿಕ ಆದಾಯ ರೂ.1 ಲಕ್ಷ ಒಳಗಿರಬೇಕು.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಅಥವಾ ಗೊಂದಲಗಳಿದ್ದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆ