LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೊಂದಲದ ವಾತಾವರಣದಲ್ಲಿ ಡಿಕೆಶಿ ಇನ್ನಿಂಗ್ಸ್ ಆರಂಭ: ಇದು ಕಾಂಗ್ರೆಸ್ ದುರಾಡಳಿತದ ಮುಂದುವರೆದ ಭಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಕೆ

ಬೆಂಗಳೂರು: ಡಿ.ಕೆ. ಶಿವಕುಮಾರ್ ಗೊಂದಲದ ವಾತಾವರಣದಲ್ಲಿ ತಮ್ಮ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ರಾಜ್ಯದ ಜನತೆ ಈಗಾಗಲೇ ಈ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರಿಗೆ ಅವಕಾಶ ಬಂದಾಗ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿನ ನಾಯಕತ್ವ ಬದಲಾವಣೆ ರಾಜ್ಯದ ಆಡಳಿತದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಇದು ಕಾಂಗ್ರೆಸ್ ದುರಾಡಳಿತದ ಮುಂದುವರೆದ ಭಾಗ. ರಾಜ್ಯದ ಆರ್ಥಿಕತೆಯ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಹಾನಿ ಮಾಡಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಗಿದ್ದು, ವ್ಯವಸ್ಥೆಯನ್ನು ಸುಧಾರಿಸಲು ಡಿ.ಕೆ. ಶಿವಕುಮಾರ್ ಅವರಿಗೆ ಸಮಯ ಸಿಗುತ್ತದೆಯೊ ಇಲ್ಲವೊ ಗೊತ್ತಿಲ್ಲ ಎಂದರು.

ಸಂಪುಟ ರಚನೆಯ ಕಸರತ್ತಿನಲ್ಲಿ ಆಂತರಿಕ ಭಿನ್ನಮತ ಹೊರಬರುತ್ತಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡದಿರುವುದರಿಂದ ಒಬಿಸಿ ಮತ್ತು ಎಸ್ಸಿ ಎಸ್ಟಿ ಸಮುದಾಯದವರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಗೊಂದಲದ ವಾತಾವರಣದಲ್ಲಿ ತಮ್ಮ ಇನ್ನಿಂಗ್ಸನ್ನು ಆರಂಭಿಸುತ್ತಿದ್ದಾರೆ ಎಂದರು.

ಹೊಸ ಸಂಪುಟ ಸೇರಲು ಪ್ರಥಮ ಬಾರಿ ಆಯ್ಕೆಯಾದವರಿಂದ ಹಿಡಿದು ಐದಾರು ಬಾರಿ ಆಯ್ಕೆಯಾದವರೂ ಲಾಬಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಸಚಿವರು ಸ್ಥಾನ ಬಿಟ್ಟು ಕೊಡಲು ಸಿದ್ದರಿಲ್ಲ. ಹೀಗಾಗಿ ದೊಡ್ಡ ಮಟ್ಟದ ಪೈಪೋಟಿ ನಡೆಯುತ್ತಿದೆ. ಅಲ್ಲದೇ ನೂತನ ಸಂಪುಟ ರಚನೆಯಲ್ಲಿ ಸಿದ್ದರಾಮಯ್ಯ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ. ಅಲ್ಲದೇ ಅವರು ರಾಜ್ಯ ರಾಜಕಾರಣದಲ್ಲಿಯೇ ಸಕ್ರೀಯರಾಗಿರುತ್ತೇನೆ ಎಂದು ಹೇಳಿರುವುದು ಅಪಾಯಕಾರಿ ಸಂದೇಶವಾಗಿದ್ದು ಇದು ಡಿ.ಕೆ.ಶಿವಕುಮಾರ್ ಮತ್ತು ಅವರ ಸರ್ಕಾರದ ಮೇಲೆ ತೂಗು ಕತ್ತಿ ನೇತಾಡಿದಂತಾಗುತ್ತದೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ