ಹೈದರಾಬಾದ್: ಬೆಂಗಳೂರಿನಿಂದ ನಾಗ್ಪುರಕ್ಕೆ ಹೊರಟಿದ್ದ ಇಂಡಿಗೀ ವಿಮಾನ ಹೈದರಾಅಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ನಾಗ್ಪುರಕ್ಕೆ 126 ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬರುತ್ತಿದ್ದಂತೆ ಪೈಲಟ್ ತಕ್ಷಣ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ತುರ್ತು ಪ್ರೋಟೋಕಾಲ್‌ಗಳನ್ನು ಸಕ್ರಿಯಗೊಳಿಸಿದ ಬಳಿಕ ವಿಮಾನವು ಹೈದರಾಬಾದ್‌ನಲ್ಲಿ ಸುರಕ್ಷಿತವಾಗಿ ಇಳಿಯಿತು. ಸದ್ಯ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.