LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್ ; ವಸತಿ ಯೋಜನೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಚಿತ್ರದುರ್ಗ ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ.ಅದರಂತೆ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಟೆಂಟು/ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರು ದಾಖಲಾತಿಗಳೊಂದಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಶ್ರೀಕಲುಗಲಕ್ಷ್ಮಿ ನಿಲಯ, 3ನೇ ಕ್ರಾಸ್, ಆದಿಶಕ್ತಿ ನಗರ, ಚಳ್ಳಕೆರೆ ರಸ್ತೆ, ಚಿತ್ರದುರ್ಗ ಕಚೇರಿ ಹಾಗೂ ದೂರವಾಣಿ ಸಂಖ್ಯೆ 9480843107 ಸಂಪರ್ಕಿಸಲು ಕೋರಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಸ್ವಂತ ನಿವೇಶನ ಹೊಂದಿರುವುದಕ್ಕೆ ಸಂಬಂಧಿಸಿದ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, 2 ಪಾಸ್‍ಫೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು, ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಯ ಪಾಸ್‍ಬುಕ್ ನಕಲು ಪ್ರತಿಯನ್ನು ಒದಗಿಸಬೇಕಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗ್ರೇಡ್-1 ಓ.ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ