LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಮರ್ಥ ಆಡಳಿತ ಮೂಲಕ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿ, ಶಾಸಕಾಂಗ ಪಕ್ಷ ಮಾತ್ರವಲ್ಲ, ಇಡೀ ರಾಜ್ಯದ ಜನ ನಿಮ್ಮ ಜೊತೆಯಲ್ಲಿರುತ್ತೆ: ಡಿಕೆಗೆ ಸಿದ್ಧರಾಮಯ್ಯ ಶುಭ ಹಾರೈಕೆ  

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಿದ್ದು, ಜಿ. ಪರಮೇಶ್ವರ್ ಅನುಮೋದನೆ ನೀಡಿದ್ದಾರೆ. ಇದಕ್ಕೆ ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರ ಜೊತೆಗೂಡಿ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಬಳಿ ಸಿಎಲ್‍ಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇದನ್ನು ಪರಿಗಣಿಸಿದ ರಾಜ್ಯಪಾಲರು ಸರ್ಕಾರ ರಚನೆಗೆ ಡಿ.ಕೆ. ಶಿವಕುಮಾರ್ ಗೆ ಆಹ್ವಾನ ನೀಡಿದ್ದಾರೆ. ಅಂತೆಯೇ ಜೂನ್ ಮೂರರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಲೋಕಭವನದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಡಿ.ಕೆ. ಶಿವಕುಮಾರ್ ಅವರಿಗೆ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು.

ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.

ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ‍್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ.

ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು  ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.

ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ.

 ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ  ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು.

ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.

ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.

ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ  ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ. ನಿಮಗೆ ಸದಾ ಯಶಸ್ಸು ಸಿಗಲಿ ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಮರ್ಥ ಆಡಳಿತ ಮೂಲಕ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿ, ಶಾಸಕಾಂಗ ಪಕ್ಷ ಮಾತ್ರವಲ್ಲ, ಇಡೀ ರಾಜ್ಯದ ಜನ ನಿಮ್ಮ ಜೊತೆಯಲ್ಲಿರುತ್ತೆ: ಡಿಕೆಗೆ ಸಿದ್ಧರಾಮಯ್ಯ ಶುಭ ಹಾರೈಕೆ  ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ: ಕಲ್ಲು, ಮೊಟ್ಟೆ, ಬೂಟು ಎಸೆದು ಹಲ್ಲೆ: ಮಮತಾ ಬ್ಯಾನರ್ಜಿ, ಖರ್ಗೆ, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಂದ ತೀವ್ರ ಖಂಡನೆBREAKING: ದುಡುಕಿನ ನಿರ್ಧಾರ ಕೈಗೊಂಡ ಸೆಕ್ಯೂರಿಟಿ ಗಾರ್ಡ್: ನೇಣಿಗೆ ಶರಣುಮನೆಯಲ್ಲಿದ್ದ 7 ಲಕ್ಷ ರೂ. ನಗದು ಕಳವು: ಸಿಕ್ಕಿಬಿದ್ದ ಆರೋಪಿಗಳಿಂದ 5 ಲಕ್ಷ ರೂ. ಜಪ್ತಿBIG NEWS: ಸಿದ್ದರಾಮಯ್ಯ ಬೆಂಬಲದೊಂದಿಗೆ ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ 2028ರಲ್ಲಿ ಮತ್ತೆ ಅಧಿಕಾರಕ್ಕೆ: ಕೆ.ಸಿ.ವೇಣುಗೋಪಾಲ್BIG NEWS: ಭಾರೀ ಮರಳು ಬಿರುಗಾಳಿಗೆ ಬೆಚ್ಚಿಬಿದ್ದ ರಾಜಸ್ಥಾನ: ಕತ್ತಲೆಯಲ್ಲಿ ಮುಳುಗಿದ ಇಡೀ ನಗರಗಳು | ಅದ್ಭುತ ದೃಶ್ಯ5 ವರ್ಷ ಕಳೆಯುವ ಮುನ್ನವೇ ಅಧಿಕಾರ ಕಳೆದುಕೊಂಡ ಕರ್ನಾಟಕದ ಮುಖ್ಯಮಂತ್ರಿಗಳ ಪಟ್ಟಿ; ಕೇವಲ 7 ದಿನ ಹಾಗೂ 6 ದಿನ ಅಧಿಕಾರದಲ್ಲಿದ್ದ ಏಕೈಕ ಮುಖ್ಯಮಂತ್ರಿ ಇವರು!ಜೂ. 3ರಂದು ಸಂಜೆ 4.05ಕ್ಕೆ ಲೋಕಭವನದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನಚಿನ್ನಪ್ರಿಯರಿಗೆ ವೀಕೆಂಡ್ ಗಿಫ್ಟ್ ಶನಿವಾರ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ: 10 ಗ್ರಾಂಗೆ ₹600 ಕಡಿಮೆ, ಬೆಂಗಳೂರಿನ ಇಂದಿನ ರೇಟ್ ಇಲ್ಲಿದೆಪಂಜಾಬ್ ಸ್ಥಳೀಯ ಸಂಸ್ಥೆಗಳ ಚುನಾವಣೆ: ಭರ್ಜರಿ ಜಯ ಸಾಧಿಸಿದ ಆಮ್ ಆದ್ಮಿ ಪಾರ್ಟಿ (AAP)