LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಿಹಾರ್ ಜೈಲಿಗೆ ಹೋದರೂ ನನ್ನ ಆತ್ಮವಿಶ್ವಾಸ ತಗ್ಗಲಿಲ್ಲ: ಸಿಎಂ ಆದ ಮೊದಲ ದಿನವೇ ಜೈಲಿಗೆ ಹೋಗಿದ್ದ ಕೆಟ್ಟ ಘಳಿಗೆ ನೆನೆದ ಡಿಕೆಶಿ

ಬೆಂಗಳೂರು: ಅಧಿಕಾರದ ಎರಡು ವರ್ಷಗಳಲ್ಲಿ ರಾಜ್ಯದ ಜನರಿಗೆ ಒಳಿತು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿನ್ನೆ ( ಜೂನ್ 3 ) ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರದ ಬಗ್ಗೆ ಹಲವು ಊಹಾಪೋಹಗಳು ಎದ್ದಿದ್ದವು. ಇಂದು ಸಂಜೆ 4.05 ಕ್ಕೆ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಈ ಶುಭಸಂದರ್ಭಕ್ಕೆ ಎಲ್ಲ ಗಣ್ಯರು ಹಾಗೂ ರಾಜ್ಯದ ಜನತೆ ಸಾಕ್ಷಿಯಾಗಿದ್ದಾರೆ. “ಹಿಂದಿನ ಹೆಜ್ಜೆಯನ್ನು ಮರೆತವನು, ಮುಂದಿನ ಹೆಜ್ಜೆಯನ್ನು ಇಡಲಾರ” ಎಂಬ ಮಾತಿನಲ್ಲಿ ನಂಬಿಕೆಯಿರಿಸಿದ್ದೇನೆ. ಇಂದು ಹೊಸ ದಿನದಂದು ಹೊಸ ಅವಕಾಶಗಳಿಗೆ ದಾರಿಮಾಡಿಕೊಡಲು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಜನತೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ರಾಜ್ಯದ ರೈತಬಳಗ ನಮ್ಮ ಬೆನ್ನುಲುಬು. ಮುಂದಿನ ದಿನಗಳಲ್ಲಿ ರೈತರೂ ಸೇರಿದಂತೆ ವಿವಿಧ ವರ್ಗದ ಜನರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು , ಕಳೆದ ಆರು ತಿಂಗಳಿನಿಂದ ನನ್ನ ಸಿದ್ಧತೆ ನಡೆದಿದೆ. ಈ ದಿಸೆಯಲ್ಲಿ ಹೊಸ ಯುವ ಯುಗ ಸೃಷ್ಠಿಸುವ ಉದ್ದೇಶದಿಂದ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದರು.

ನನ್ನ ಮೇಲಿನ ಜನರಿಗೆ ಅಪಾರ ವಿಶ್ವಾಸವಿದೆ. ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ವೆ ಎಂಬುದರಲ್ಲಿ ವಿಶ್ವಾಸವಿರಿಸಿದ್ದೇನೆ. ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ ರಾಜಕೀಯ ಅನುಭವ ನೆರವಾಗಲಿದೆ. 1985ರಿಂದ ವಿಧಾನಸಭೇ ಚುನಾವಣೆಯಲ್ಲಿ ಸ್ಪರ್ಧಿಸಿ, ನಂತರ ಜಿಲ್ಲಾಪಂಚಾಯತ್, ಶಾಸಕರಾಗಿ, ವಿವಿಧ ಸಚಿವ ಸಂಪುಟದ ಭಾಗವಾಗಿ ಸೇವೆ ಸಲ್ಲಿಸಿದ್ದೇನೆ. ಸಣ್ಣ ವಯಸ್ಸಿನಲ್ಲಿ ಅಧಿಕಾರ ಕಂಡರೂ, ಬದುಕಿನ ಹಲವು ಏಳುಬೀಳುಗಳನ್ನು ಕಂಡಿದ್ದೇನೆ. ರಾಜಕೀಯ ತಂತ್ರಗಳ ಕಾರಣ ತಿಹಾರ್ ಜೈಲಿಗೆ ಹೋದರೂ, ನನ್ನ ಆತ್ಮವಿಶ್ವಾಸ ತಗ್ಗಲಿಲ್ಲ. ಇದೇ ಆತ್ಮವಿಶ್ವಾಸದಿಂದ ಜನರ ಸೇವೆಗೆ ಸಿದ್ಧವಾಗಿ ನಿಂತಿದ್ದೇನೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ