LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನ ಕೈ ತಪ್ಪಿದ್ದು , ಎರಡನೇ ಪಟ್ಟಿಯಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ ; ಸಂತೋಷ್ ಲಾಡ್

ಬೆಂಗಳೂರು: ರಾಜ್ಯದಲ್ಲಿ ರಚನೆಯಾಗಿರುವ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ ಕುರಿತು ಪ್ರತಿಕ್ರಿಯಿಸಿರುವ ಸಂತೋಷ್ ಲಾಡ್ ಅವರು, ಯಾವುದೇ ಅತೃಪ್ತಿ ವ್ಯಕ್ತಪಡಿಸದೆ, “ಇದು ಜೀವನದ ಒಂದು ಭಾಗ” ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂತೋಷ್ ಲಾಡ್ , ಸಂಪುಟದ ಮೊದಲ ಪಟ್ಟಿಯಲ್ಲಿ ಅವಕಾಶ ಸಿಗದಿದ್ದರೂ, ಎರಡನೇ ಪಟ್ಟಿಯಲ್ಲಿ ತಮಗೆ ಸಚಿವ ಸ್ಥಾನ ಸಿಗಲಿದೆ ಎಂಬ ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ, ಪಕ್ಷದಲ್ಲಿ ಪ್ರತಿಯೊಬ್ಬರೂ ಅವಕಾಶಕ್ಕಾಗಿ ಪ್ರಯತ್ನಿಸುವುದು ಸಹಜ, ತಾನೂ ಕೂಡ ಆ ಸಾಲಿನಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ.

ಹೊಸ ಸರ್ಕಾರದ ಮೇಲಿನ ಭರವಸೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರವು ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ,. ಹೊಸ ಸರ್ಕಾರ ಹೊಸ ಐಡಿಯಾಗಳೊಂದಿಗೆ ಜನರ ನಿರೀಕ್ಷೆಯನ್ನು ಪೂರೈಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2028ರ ಗುರಿ ಮುಂದಿನ ದಿನಗಳಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸುವುದೇ ನಮ್ಮ ಮುಂದಿನ ಗುರಿ. 2028ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸುತ್ತೇವೆ ಎಂದು ಸಂತೋಷ್ ಲಾಡ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ