ಬಳ್ಳಾರಿ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಜಿಲ್ಲೆಯ 05 ಗ್ರಾಮ ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಎಂ.ಗೋನಾಳ್, ಸಿರುಗುಪ್ಪ ತಾಲ್ಲೂಕಿನ ಬಲಕುಂದಿ, ಕೆ.ಬೆಳಗಲ್ಲು ಮತ್ತು ಸಂಡೂರು ತಾಲ್ಲೂಕಿನ ಸುಶೀಲನಗರ, ನರಸಿಂಗಪುರ ಗ್ರಾಮ ಪಂಚಾಯತಿಗಳು.
ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/directApply… ಗೆ ಭೇಟಿ ನೀಡಬಹುದು. ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ : ಪ್ರಸ್ತಕ ಸಾಲಿಗೆ ಬಳ್ಳಾರಿ ಪಶ್ಚಿಮ ವಲಯದ ಗುಗ್ಗರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಹಾಗೂ ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿಎಸ್ಸಿ ಬಿ.ಇಡಿ ಪದವಿ ಪಡೆದ ಅಭ್ಯರ್ಥಿಗಳು ಜೂ.08 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಗುಗ್ಗರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಮುಖ್ಯೋಪಾಧ್ಯಾಯರ ಕಚೇರಿಗೆ ಸಲ್ಲಿಸಬೇಕು.ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಅನುಭವಕ್ಕೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.9964645285, 9740680501 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.