LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ತಹಶೀಲ್ದಾರ್ ಕಚೇರಿಗೆ ಹೋಗಿ ಕೆಲಸ ಮುಗಿಸಿಕೊಂಡು ಸಂತೋಷದಿಂದ ಹೊರಬರಬೇಕು; ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಮೊದಲ ಸಭೆಯ ಹೈಲೈಟ್ಸ್ ಇಲ್ಲಿವೆ

ಬೆಂಗಳೂರು: ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಾಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ‌ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ‌ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಮೂರು ವರ್ಷಗಳಲ್ಲಿ ಎಲ್ಲ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತಂದಿದ್ದೀರಿ. ಅನೇಕ ಭರವಸೆಗಳನ್ನು ಈಡೇರಿಸಲಾಗಿದೆ. ನೂತನ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರವೂ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜನಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಬೇಕು. ನಿಮ್ಮ ಸೇವೆ ಜನಸಮುದಾಯಕ್ಕೆ ಅನುಕೂಲವಾಗಬೇಕು ಎಂದು ಅವರು ಹೇಳಿದರು.

ಯುವ ಸಮುದಾಯ ಸೂಕ್ಷ್ಮವಾಗಿ ನೋಡುತ್ತಿದೆ. ಯುವಕರ ಆಪೇಕ್ಷೆಯಂತೆ ಆಡಳಿತ ನೀಡಬೇಕು ಎಂಬುದು ಸರ್ಕಾರದ ದೃಷ್ಟಿಕೋನವಾಗಿದೆ. ಬರೀ ಭರವಸೆಗಳನ್ನು ಪೂರ್ಣಗೊಳಿಸುವುದಷ್ಟೆ ಅಲ್ಲ. ರಾಜ್ಯದ ಅಭಿವೃದ್ಧಿಗೆ ದೃಷ್ಟಿಕೋನ ನೀಡಬೇಕಿದೆ. ಕರ್ನಾಟಕ ಪ್ರಗತಿಪರ ರಾಜ್ಯ. ಎಲ್ಲರೂ ಕರ್ನಾಟಕದತ್ತ ಗಮನ ಹರಿಸುತ್ತಾರೆ. ಇದನ್ನು ನಾವು ಯಾವ ರೀತಿ ಸಾಕಾರಗೊಳಿಸಬೇಕು ಎಂಬುದು ಸಭೆಯ ಮೂಲ ಉದ್ದೇಶವಾಗಿದೆ ಎಂದರು.

ಅನೇಕ ಸಂದರ್ಭಗಳಲ್ಲಿ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಗುರುತಿಸಲಾಗಿದೆ. ಆ ಅವಕಾಶ ಮತ್ತೆ ಬಂದಿದೆ. ಎಲ್ಲ ಮಾನದಂಡಗಳಲ್ಲಿಯೂ ನಮ್ಮ ರಾಜ್ಯ ಅಗ್ರಸ್ಥಾನದಲ್ಲಿರಬೇಕು.

ಸಾಮಾನ್ಯ ರೈತ ತಹಶೀಲ್ದಾರರ ಕಚೇರಿಗೆ ಹೋಗಿ, ತನ್ನ‌‌ ಕೆಲಸ‌ ಮುಗಿಸಿಕೊಂಡು ಸಂತೋಷದಿಂದ ಹೊರಬರಬೇಕು. ತನಗಾದ ಅನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ದೂರು ಕೊಡುವ ವ್ಯಕ್ತಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ ಸಮಾಧಾನವಾಗಬೆಕು. ಈ ಕೆಲಸ ಅನೇಕ ಸಂದರ್ಭಗಳಲ್ಲಿ ಅಗುತ್ತಿಲ್ಲ‌. ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಕಡತ ವಿಲೇವಾರಿ ಆದರೆ ಸಾಕು, ಕೆಲಸ ಮುಗಿಯಿತು ಎಂಬ ಮನಸ್ಥಿತಿ ನಮ್ಮ ಅಧಿಕಾರಿಗಳಿಗೆ ಇದೆ . ಈ ರೀತಿಯ ಯೋಚನೆ ಬದಲಾಗಬೇಕು ಎಂದು ಹೇಳಿದರು.

ಒಟ್ಟು ಎಂಟು ವರ್ಷ ಪೊಲೀಸ್ ಇಲಾಖೆಯ ಜವಾಬ್ದಾರಿಯನನ್ನು ನಿಭಾಯಿಸಿದ್ದೇನೆ. ಪೊಲೀಸ್ ಇಲಾಖೆಯು ಸರ್ಕಾರದ ಮುಖ. ಉತ್ತಮವಾಗಿ ಕೆಲಸ ಮಾಡಬೇಕು. ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಯಾವುದೇ ಕೋಮು ಸಂಘರ್ಷ, ಗಲಭೆಗಳು ಆಗದಂತೆ ಕೆಲಸ‌ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಸ್ಥಾಪನೆಯಾದ ಬಳಿಕ ಎಲ್ಲ ರೀತಿಯ ಗಲಭೆಗಳು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ವಹಿಸಿ ಪೊಲೀಸ್ ಇಲಾಖೆ ಕೆಲಸ ಮಾಡಬೇಕಿದೆ‌ ಎಂದರು.

ಮಾದಕ ವಸ್ತುಗಳ ವಿರುದ್ಧ ಕಳೆದ ಮೂರು ವರ್ಷಗಳಿಂದ ಸಮರ ಸಾರಲಾಗಿದೆ. ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಲಾಗಿದೆ. ಯುವಕರನ್ನು ಭವಿಷ್ಯವನ್ನು ಹಾಳು ಮಾಡುತ್ತಿರುವ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು. ಡ್ರಗ್ಸ್ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ