ಬೆಂಗಳೂರು: 5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೊಬೈಲ್ ಫೋನ್ ಪರಿಕರಗಳ ಪ್ಯಾಕಿಂಗ್‌ಗೆ ಪರವಾನಗಿ ಅನುಮೋದಿಸಲು ಪ್ರತಿಯಾಗಿ 5 ಸಾವಿರ ರೂ ಸ್ವೀಕರಿಸುತ್ತಿದ್ದಾಗ ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ವಾಣಿಶ್ರೀ ಎಂ.ಎಸ್ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರ್.ಎಸ್.ಪಾಳ್ಯದ ನಿವಾಸಿಯಾದ ಕಿರಣ್ ಆರ್.ಎಂ ಅವರು ಮೊಬೈಲ್ ಫೋನ್ ಪರಿಕರಗಳ ಪ್ಯಾಕಿಂಗ್‌ಗೆ ಪರವಾನಗಿ ಕೋರಿ ಕಾನೂನು ಮಾಪನಶಾಸ್ತ್ರ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಪರವಾನಗಿ ಅನುಮೋದನೆಗೆ ಸಹಾಯಕ ನಿಯಂತ್ರಕಿ ವಾಣಿಶ್ರೀ ಅವರು 10 ಸಾವಿರ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಿ ಕಿರಣ್ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಎಸ್.ಪಿ ಶಿವಪ್ರಕಾಶ್ ದೇವರಾಜು ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ 5 ಸಾವಿರ ರೂ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ವಾಣಿಶ್ರೀ ಅವರನ್ನ ವಶಕ್ಕೆ ಪಡೆದಿದೆ.