LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಪಿ ಲಕ್ಷ್ಮಣ್ ನಿಂಬರಗಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ವಂಚನೆ: ಆರೋಪಿ ಅರೆಸ್ಟ್

ವಿಜಯಪುರ: ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಅಂತರಜಿಲ್ಲಾ ಸೈಬರ್ ವಂಚಕನನ್ನು ವಿಜಯಪುರ ಸಿಇಎನ್ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಈತ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿ ಗ್ರಾಮದ ನಿವಾಸಿ ಸುರೇಶ್ ಅಥಣಿ ಎಂಬುವವರಿಗೆ ಲೋಕೋಪಯೋಗಿ ಇಲಾಖೆಯಲ್ಲಿ ಎಸ್‌ಡಿಸಿ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದ. ಇದಕ್ಕಾಗಿ ಸುರೇಶ್ ಅವರಿಂದ ಹಂತ ಹಂತವಾಗಿ ಒಟ್ಟು 5,04,600 ರೂಪಾಯಿ ಹಣವನ್ನು ಪಡೆದು ವಂಚಿಸಿದ್ದ.

ವರ್ಷಗಳೇ ಕಳೆದರೂ ಕೆಲಸ ಸಿಗದಿದ್ದಾಗ ಸುರೇಶ್ ಅವರುಗೆ ಅನುಮಾನಬಂದಿದೆ. ಅತ್ತ ಕೆಲಸವೂ ಇಲ್ಲ, ಇತ್ತ ಕೊಟ್ಟ ಹಣವೂ ಇಲ್ಲದೇ ಕಂಗಾಲಾಗಿದ್ದಾರೆ. ತಕ್ಷಣ ಸುರೇಶ್‌ ವಿಜಯಪುರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಸೈಬರ್ ಪೊಲೀಸರು ತಾಂತ್ರಿಕ ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿ ಹಣಮಂತ, ವಿಜಯಪುರ ಎಸ್ಪಿಯವರ ಹೆಸರನ್ನೇ ಬಳಸಿಕೊಂಡು [email protected] ಎಂಬ ನಕಲಿ ಇಮೇಲ್ ಐಡಿ ಸೃಷ್ಟಿಸಿದ್ದ. ಅದರ ಮೂಲಕ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಸಾರ್ವಜನಿಕರನ್ನು ಸಂಪರ್ಕಿಸುತ್ತಿದ್ದ. ಜಿಲ್ಲೆಯ ಪೊಲೀಸ್ ಅಧಿಕಾರಿಯ ಅಧಿಕೃತ ಖಾತೆ ಇರಬಹುದೆಂದು ನಂಬಿ ಸಾರ್ವಜನಿಕರು ಆತನ ಜಾಲಕ್ಕೆ ಬೀಳುತ್ತಿದ್ದರು.

ಆರೋಪಿಯನ್ನು ಬಂಧಿಸಿರುವ ಪೊಲಿಸರು ವಿಚಾರಣೆ ನಡೆಸಿದ್ದು, ಈ ವೇಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿ ಇದೇ ಮಾದರಿಯಲ್ಲಿ ರಾಜ್ಯದ ಇತರ ಪ್ರಭಾವಿ ಅಧಿಕಾರಿಗಳು ಅಥವಾ ರಾಜಕಾರಣಿಗಳ ಹೆಸರನ್ನು ಬಳಸಿ ಬೇರೆಯವರಿಗೂ ವಂಚಿಸಿರುವ ಸಾಧ್ಯತೆಗಳಿದ್ದು, ಆ ನಿಟ್ಟಿನಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ