LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತಾರೆ ಎಂದು ಹೇಳ್ತಾರಾ? ಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ಪ್ರಶ್ನೆ

ಬೆಂಗಳೂರು: ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ. ಶಿವಕುಮಾರ್ ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತಾರೆ ಎಂದು ಹೇಳ್ತಾರಾ? ಎಂದರು.

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸುರ್ಜೆವಾಲ ಅವರು ಟೀಕೆ ಮಾಡಿರುವ ವಿಚಾರವಾಗಿ, ನಾನು ಸದ್ಯಕ್ಕೆ ಏನು ಮಾತನಾಡುವುದಿಲ್ಲ. ಅವರು ಮಾತಾಡಿದ್ದಾರೆ. ಆದರೆ ನಾನು ಮಾತಾಡಕ್ಕೆ ಹೋಗುವುದಿಲ್ಲ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ ಎಂದರು.

ಇನ್ನು ಸೂರಜ್ ಹೆಗ್ಡೆ ಆತ್ಮೀಯ ಸ್ನೇಹಿತ. ತ್ಯಾಗಕ್ಕೆ ಹೆಸರಾದವರು. ಇದೇ ಸ್ಥಾನ ಬೇಕು ಎಂದೂ ಕೇಳುತ್ತಿರಲಿಲ್ಲ. ನಾನು ಹಿಂದೆ ಅವರಿಗೆ ಮೈಸೂರು ಸಂಸದ ಸ್ಥಾನಕ್ಕೆ ಟಿಕೆಟ್ ಕೊಡಿಸಬೇಕು ಅಂತ ಬಹಳ ಹೋರಾಟ ಮಾಡಿದ್ದೆ. ಅವರು ದೇವರಾಜ ಅರಸು ಅವರ ಮೊಮ್ಮಗ. ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನ ಜೊತೆ ಪದಾಧಿಕಾರಿಯಾಗಿದ್ದವರು. ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾಗಿದ್ದವರು. ನಮ್ಮ ಸರ್ಕಾರ ರಾಜ್ಯ ಮಟ್ಟದ ಸಚಿವ ಸ್ಥಾನ ಕೊಟ್ಟಿತ್ತು. ಅವರ ಮೇಲೆ ನಾನು ದೊಡ್ಡ ಆಕಾಂಕ್ಷೆ ಇಟ್ಟುಕೊಂಡಿದ್ದೆ. ಪಕ್ಷ ಅವರ ಮೇಲೆ ಅವಲಂಬಿಸಿತ್ತು ಎಂದು ತಿಳಿಸಿದರು.

ನಿಷ್ಠಾವಂತ ಕಾರ್ಯಕರ್ತ ಪಕ್ಷಕ್ಕೆ ಸಿಗುವುದು ಬಹಳ ವಿಶೇಷ. ಈಗಲೂ ಕೂಡ ಅನೇಕ ವಿಚಾರಗಳನ್ನು ಅವರ ವಿಚಾರದಲ್ಲಿ ಚಿಂತನೆ ಮಾಡಲಾಗಿತ್ತು. ಎಐಸಿಸಿ ನಮ್ಮ ಕಾರ್ಯದರ್ಶಿಗಳಾಗಿ, ನಮ್ಮ ರಾಜ್ಯ ಮಟ್ಟದ ಪದಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು ಎಂದರು.

ಅವರ ಕುಟುಂಬದ ದುಃಖ ನೋಡಲು ಆಗುತ್ತಿಲ್ಲ. ಅವರ ತಂದೆ ಕೂಡ ಒಬ್ಬ ಹಿರಿಯ ದೊಡ್ಡ ರಾಜಕಾರಣಿ. ವೈಯಕ್ತಿಕವಾಗಿ ನಮ್ಮೆಲ್ಲರಿಗೂ ಕೂಡ ಬಹಳ ದುಃಖ ಉಂಟಾಗಿದೆ. ಪಕ್ಷದ ಹಾಗೂ ಸರ್ಕಾರದ ಪರವಾಗಿ ಗೌರವ ನಮನ ಸಲ್ಲಿಸುತ್ತೇನೆ. ಕರ್ನಾಟಕ ಸರ್ಕಾರ ಅವರಿಗೆ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು. ಅವರ ಕುಟುಂಬದವರು ಅಂತಿಮ ಕಾರ್ಯ ಯಾವಾಗ ತೀರ್ಮಾನ ಮಾಡುತ್ತಾರೋ ಆಗ ಗೌರವವನ್ನು ಕೊಡುತ್ತೇವೆ. ಈ ವಿಚಾರವಾಗಿ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶ ತಿಳಿಸಿದ್ದೇನೆ. ಅವರ ಅಂತ್ಯಕ್ರಿಯೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ