ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿಗೆ ಕಿರಕುಳ ನೀಡಿದ ಪತಿಗೆ ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಶಿವಮೊಗ್ಗದ ಅಬ್ಬಲಗೆರೆ ಹುಣಸೋಡು ಗ್ರಾಮದ ವಾಸಿ ಶ್ರೀನಿವಾಸ ತಮ್ಮ ಪತ್ನಿ ಕಾವ್ಯ ಅವರಿಗೆ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾಗಿ 2023ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖಾಧಿಕಾರಿಗಳು ಪ್ರಕರಣದ ತನಿಖೆ ನಡೆಸಿ 2024ರಲ್ಲಿ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿ ವಿಚಾರಣೆ ನಡೆಸಿ ಪರಸ್ಪರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಇವರು ಶ್ರೀನಿವಾಸರಿಗೆ ಕಲಂ.: 498(ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷ ಸಾದಾ ಸಜೆ ಶಿಕ್ಷೆ ಹಾಗೂ ಹತ್ತು ಸಾವಿರ ರೂ.ಗಳ ದಂಡವನ್ನು ವಿಧಿಸಿ ತೀರ್ಪು ನೀಡಿರುತ್ತಾರೆ.
ಅಭಿಯೋಜನೆಯ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.