LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಸರ್ವರ್ ಸಮಸ್ಯೆ ಹಿನ್ನೆಲೆ ಬೆರಳಚ್ಚು ವಿನಾಯಿತಿ

ಬೆಂಗಳೂರು: ಪಡಿತರ ಚೀಟಿದಾರರಿಗೆ ಎರಡು ಬಾರಿ ಬೆರಳಚ್ಚು ನೀಡುವುದರಿಂದ ಆಹಾರ ಇಲಾಖೆ ವಿನಾಯಿತಿ ನೀಡಿದೆ.

ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ತಿಂಗಳು ಪಡಿತರ ಪಡೆಯಲು ಫಲಾನುಭವಿಗಳು ತೊಂದರೆ ಅನುಭವಿಸಿದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ಕ್ರಮ ಕೈಗೊಂಡಿದೆ. ಆಹಾರ ಇಲಾಖೆ ಎರಡು ತಿಂಗಳ ಅಕ್ಕಿಯನ್ನು ಒಂದೇ ಬಾರಿಗೆ ಪಡಿತರ ಚೀಟಿದಾರರಿಗೆ ನೀಡುತ್ತಿದೆ. ಹೀಗಾಗಿ ಪಡಿತರ ಚೀಟಿದಾರರು ಎರಡು ಬಾರಿ ಬೆರಳಚ್ಚು ನೀಡಬೇಕಿತ್ತು. ಕಳೆದ ಬಾರಿ ಇದೇ ರೀತಿ ಮಾಡಿದ್ದರಿಂದ ಸರ್ವರ್ ಸಮಸ್ಯೆ ಉಂಟಾಗಿ ಫಲಾನುಭವಿಗಳು ತೊಂದರೆ ಅನುಭವಿಸುವಂತಾಗಿತ್ತು. ಇದನ್ನು ನಿವಾರಿಸಲು ಒಂದೇ ಬಾರಿ ಬೆರಳಚ್ಚು ಪಡೆದುಕೊಂಡು ಅಕ್ಕಿ ನೀಡಲು ಆಹಾರ ಇಲಾಖೆಯಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಸೂಚನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಎರಡು ತಿಂಗಳ ಪಡಿತರವನ್ನು ಮೇನಲ್ಲಿ ಒಂದೇ ಬಾರಿ ಕಾರ್ಡ್ ದಾರರಿಗೆ ವಿತರಿಸಲಾಗಿತ್ತು. ಕೇಂದ್ರದ ಪಾಲಿನ ಎರಡು ತಿಂಗಳ ಅಕ್ಕಿಯನ್ನು ಒಂದೇ ಬಾರಿಗೆ ವಿತರಿಸಿದ್ದ ಪರಿಣಾಮ ರಾಜ್ಯದ ಪಾಲಿನ ಅಕ್ಕಿಯನ್ನು ಕಾರ್ಡ್ ದಾರರಿಗೆ ವಿತರಣೆ ಮಾಡಿರಲಿಲ್ಲ.

ಮೇ ಮತ್ತು ಜೂನ್ ತಿಂಗಳ ಅಕ್ಕಿಯನ್ನು ಒಂದೇ ಬಾರಿ ಜೂನ್ ನಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಹೀಗಾಗಿ ಒಂದೇ ಬಾರಿ ಬೆರಳಚ್ಚು ಪಡೆದು ಅಕ್ಕಿ ವಿತರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಿಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ಪಡೆದುಕೊಳ್ಳಬಹುದು. ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ಸಮಯ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ