LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಕ್ಸ್ ಆಫೀಸ್‌ನಲ್ಲಿ ರಾಮ್ ಚರಣ್ ಹವಾ: ವಿಮರ್ಶಕರ ನೆಗೆಟಿವ್ ಕಾಮೆಂಟ್ಸ್ ಬದಿಗೊತ್ತಿ ದಾಖಲೆ ಬರೆದ ‘ಪೆಡ್ಡಿ’

ಬಾಲಿವುಡ್ ನಟಿ ಜಾನ್ವಿ ಕಪೂರ್ ಪಾತ್ರದ ಸೃಷ್ಟಿ ನಡೆಸಿರುವ ವಿವಾದಗಳ ನಡುವೆಯೂ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ‘ಪೆಡ್ಡಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್ ಮಾಡುತ್ತಿದೆ. ನೆಗೆಟಿವ್ ಕಾಮೆಂಟ್‌ಗಳನ್ನು ಬದಿಗೊತ್ತಿ ಚಿತ್ರಮಂದಿರಗಳತ್ತ ಪ್ರೇಕ್ಷಕರು ಲಗ್ಗೆ ಇಡುತ್ತಿದ್ದು, ಕೇವಲ ಮೂರು ದಿನಗಳಲ್ಲಿ ಸಿನಿಮಾ ಭಾರಿ ಕಮಾಯಿ ಮಾಡಿದೆ. ಮೂರನೇ ದಿನ ಭಾರತದಲ್ಲಿ ಒಟ್ಟು 28.85 ಕೋಟಿ ರೂಪಾಯಿ ಗಳಿಸುವ ಮೂಲಕ ಸಿನಿಮಾ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ.

ಜೂನ್ 4 ರಂದು ತೆರೆಕಂಡ ಈ ಬಿಗ್ ಬಜೆಟ್ ಸಿನಿಮಾ ಸದ್ಯ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿದೆ. ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರ ಪಾತ್ರವನ್ನು ತೋರಿಸಿರುವ ರೀತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ವಿಮರ್ಶಕರು ಹಾಗೂ ಸಿನಿಪ್ರಿಯರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಈ ಯಾವುದೇ ವಿವಾದಗಳು ಸಿನಿಮಾದ ಕಲೆಕ್ಷನ್ ಮೇಲೆ ಪ್ರಭಾವ ಬೀರಿದಂತೆ ಕಾಣುತ್ತಿಲ್ಲ.

ಮೂರನೇ ದಿನದ ಗಳಿಕೆ ವಿವರ: ಖ್ಯಾತ ಬಾಕ್ಸ್ ಆಫೀಸ್ ವಿಶ್ಲೇಷಣಾ ವೆಬ್ ಸೈಟ್ ಸ್ಯಾಕ್ನಿಲ್ಕ್ ವರದಿಗಳ ಪ್ರಕಾರ,’ಪೆಡ್ಡಿ’ ಚಿತ್ರವು ಎರಡನೇ ದಿನಕ್ಕೆ ಹೋಲಿಸಿದರೆ ಮೂರನೇ ದಿನ ಶೇಕಡಾ 7.2 ರಷ್ಟು ಹೆಚ್ಚಿನ ಗಳಿಕೆ ಕಂಡಿದೆ. ಎರಡನೇ ದಿನ 26.90 ಕೋಟಿ ರೂಪಾಯಿ ಗಳಿಸಿದ್ದ ಸಿನಿಮಾ, ಮೂರನೇ ದಿನ 28.85 ಕೋಟಿ ರೂಪಾಯಿ ಲೂಟಿ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಸಿನಿಮಾದ ಒಟ್ಟು ಕಲೆಕ್ಷನ್ 125.25 ಕೋಟಿ ರೂಪಾಯಿಗೆ ತಲುಪಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗ್ರಾಸ್ ಕಲೆಕ್ಷನ್ 149.07 ಕೋಟಿ ರೂಪಾಯಿಯಾಗಿದೆ.

ವಿಶ್ವಮಟ್ಟದಲ್ಲಿ ಕಮಾಲ್: ಕೇವಲ ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ರಾಮ್ ಚರಣ್ ಕ್ರೇಜ್ ಜೋರಾಗಿದೆ. ಮೂರನೇ ದಿನ ವಿದೇಶಿ ಮಾರುಕಟ್ಟೆಯಿಂದಲೇ ಸಿನಿಮಾ 8 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಾಗರೋತ್ತರ ಗಳಿಕೆ 42 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಸಿನಿಮಾದ ವಿಶ್ವಾದ್ಯಂತ ಗ್ರಾಸ್ ಕಲೆಕ್ಷನ್ 191.07 ಕೋಟಿ ರೂಪಾಯಿಗೆ ತಲುಪಿದ್ದು, ಶೀಘ್ರದಲ್ಲೇ 200 ಕೋಟಿ ಕ್ಲಬ್ ಸೇರುವುದು ಗ್ಯಾರಂಟಿ ಎನ್ನಲಾಗಿದೆ. ಈ ಚಿತ್ರವನ್ನು ಸುಮಾರು 300 ರಿಂದ 350 ಕೋಟಿ ರೂಪಾಯಿ ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ ಎಂದು ಅಂದಾಜಿಸಲಾಗಿದೆ.

ಚಿತ್ರ ಹೇಗಿದೆ?: ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ಅದ್ಭುತ ಮೇಕಿಂಗ್ ಸಿನಿಮಾದ ದೊಡ್ಡ ಪ್ಲಸ್ ಪಾಯಿಂಟ್. ರಾಮ್ ಚರಣ್ ತಮ್ಮ ನಟನೆಯಿಂದ ಚಿತ್ರಕ್ಕೆ ಜೀವ ತುಂಬಿದ್ದಾರೆ. ಇನ್ನು ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಅವರ ಹಿನ್ನೆಲೆ ಸಂಗೀತ ಮತ್ತು ಹಾಡುಗಳು ಸಿನಿಮಾವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿವೆ. ಸಾಹಸ ದೃಶ್ಯಗಳು, ನೃತ್ಯ ಮತ್ತು ವಿಎಫ್ಎಕ್ಸ್ ಕೆಲಸಗಳು ಅತ್ಯುತ್ತಮವಾಗಿ ಮೂಡಿಬಂದಿವೆ. ಆದರೆ ಚಿತ್ರದ ಎಡಿಟಿಂಗ್ ಕಡೆಗೆ ಇನ್ನು ಸ್ವಲ್ಪ ಗಮನ ಹರಿಸಬಹುದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಜಗಪತಿ ಬಾಬು, ದಿವ್ಯೇಂದು ಮತ್ತು ಬೊಮನ್ ಇರಾನಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ