LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಭೇಟಿಯಾದ ಮಮತಾ ಬ್ಯಾನರ್ಜಿ: ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕ್ಕೇರಿದ್ದು, ಸಂಸದರ ಬಂಡಾಯದ ನಡುವೆ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ವಿರೋಧ ಪಕ್ಷಗಳ ‘ಇಂಡಿಯ’ ಒಕ್ಕೂಟದ ಪ್ರಮುಖ ಸಭೆಯ ಮರುದಿನವೇ ಈ ಭೇಟಿ ನಡೆದಿರುವುದು ರಾಷ್ಟ್ರ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಟಿಎಂಸಿಯಲ್ಲಿನ ರಾಜಕೀಯ ಬೆಳವಣಿಗೆಗಳ ನಡುವೆ, ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಈ ಇಬ್ಬರು ಹಿರಿಯ ನಾಯಕಿಯರ ಸಭೆ ನಡೆದಿದೆ. ಸೋಮವಾರ ನಡೆದ ಇಂಡಿಯ ಒಕ್ಕೂಟದ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಪರಸ್ಪರ ಆಲಂಗಿಸಿಕೊಂಡು ಆತ್ಮೀಯತೆ ಪ್ರದರ್ಶಿಸಿದ್ದ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇತ್ತೀಚಿನ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಸೋಲು ಕಂಡ ನಂತರ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಡಳಿತ ಕೊನೆಗೊಂಡಿದ್ದು, ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರ ಹಿಡಿದಿದೆ. ಈ ಹಿನ್ನಲೆಯಲ್ಲಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಒಟ್ಟಾಗಿ ಕೆಲಸ ಮಾಡುವ ಮತ್ತು ಸಂಸತ್ತಿನಲ್ಲಿ ಜಂಟಿ ಕಾರ್ಯತಂತ್ರ ರೂಪಿಸುವ ಕುರಿತು ಇಬ್ಬರೂ ನಾಯಕಿಯರು ಚರ್ಚಿಸಿದ್ದಾರೆ ಎನ್ನಲಾಗಿದೆ.

ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಒಕ್ಕೂಟದ ಬಲವರ್ಧನೆಗೆ ಯತ್ನಿಸುತ್ತಿದ್ದರೆ, ಇತ್ತ ಅವರ ಸ್ವಂತ ಪಕ್ಷದಲ್ಲೇ ಭಾರಿ ಬಂಡಾಯ ಭುಗಿಲೆದ್ದಿದೆ. ಟಿಎಂಸಿಯ ಪ್ರಮುಖ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಸೇರಿದಂತೆ ಸುಮಾರು 20 ಲೋಕಸಭಾ ಸಂಸದರು ದೆಹಲಿಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ತಾವು ಟಿಎಂಸಿ ನಾಯಕತ್ವದಿಂದ ಬೇಸತ್ತಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಎನ್‌ಡಿಎ ಒಕ್ಕೂಟವನ್ನು ಸೇರಲು ಅಥವಾ ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳಲು ಅವಕಾಶ ಕೋರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ