LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧದ ಎಫ್ಐಆರ್ ರದ್ದು: ಹೈಕೋರ್ಟ್ ಆದೇಶ

ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್ಐಾರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ ಮತ್ತು ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪ ದಡಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ವಿರುದ್ಧ ಯಾವುದೇ ನೇರ ಸಾಕ್ಷ್ಯಾಧಾರಗಳಿಲ್ಲ ಎಂದು ಹೈಕೋರ್ಟ್ ಈ ಆದೇಶ ನೀಡಿದೆ. ಕುಂದಾಪುರ ಶಾಲೆಯೊಂದರ ಪ್ರಾಂಶುಪಾಲರಿಗೆ ರಾಜ್ಯ ಪ್ರಶಸ್ತಿ ತಡೆದಿರುವುದನ್ನು ವಿರೋಧಿಸಿ 2024ರ ಸೆಪ್ಟೆಂಬರ್ 6ರಂದು ಮಣಿಪಾಲದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ ಮಾಡಲಾಗಿತ್ತು. ಎನ್.ಎಸ್.ಯು.ಐ. ಮುಖಂಡ ಸೌರಭ್ ಬಲ್ಲಾಳ್ ಈ ಬಗ್ಗೆ ಮಣಿಪಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದರ ಆಧಾರದ ಮೇಲೆ ಯಶ್ ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣದ ವಿಚಾರಣೆ ನಡೆಸಿ ಅರ್ಜಿದಾರರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲದೆ ತನಿಖೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟು, ಹರಿಯಾಣ ಸರ್ಕಾರ ಮತ್ತು ಭಜನ್ ಲಾಲ್ ಪ್ರಕರಣದ ತೀರ್ಪು ಉಲ್ಲೇಖಿಸಿ ಎಫ್ಐಾರ್ ರದ್ದುಗೊಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ