ಬೆಂಗಳೂರು: ಆರ್.ಟಿ.ಇ. ಅಡಿ ಮಕ್ಕಳನ್ನು ಶಾಲೆಗೆ ಸೇರಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಮೊದಲ ಸುತ್ತಿನ ಆರ್.ಟಿ.ಇ. ಸೀಟು ಹಂಚಿಕೆ ಬಳಿಕ ಉಳಿಕೆಯಾದ ಸೀಟುಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಜೂನ್ 11ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇಕಡ 25ರಷ್ಟು ಸೀಟುಗಳಿಗೆ ಅರ್ಜಿ ಸಲ್ಲಿಸಬಹುದು. ವೆಬ್‌ಸೈಟ್ http://schooleducation.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಆನ್ಲೈನ್ ಲಾಟರಿ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು. ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲು ಜೂನ್ 13 ರಿಂದ 19 ರವರೆಗೆ ಅವಕಾಶ ನೀಡಲಾಗಿದೆ. ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ಜೂನ್ 13 ರಿಂದ 19 ರವರೆಗೆ ತಂತ್ರಾಂಶದಲ್ಲಿ ಅಳವಡಿಸಬೇಕಿದೆ ಎಂದು ಹೇಳಲಾಗಿದೆ.