LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚಾರಿ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಕೊಪ್ಪಳ: ಸಂಚಾರಿ ಹಾಗೂ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶವಿದ್ದು, ದಂಡದ ಮೊತ್ತದಲ್ಲಿ ಶೇ 50 ರಷ್ಟು ರಿಯಾಯತಿ ಸೌಲಭ್ಯವಿದೆ.

ಕರ್ನಾಟಕ ರಾಜ್ಯದ ಸಂಚಾರಿ ಹಾಗೂ ಸಾರಿಗೆ ಇಲಾಖೆಗಳಲ್ಲಿ ಸಂಚಾರಿ ಹಾಗೂ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ 1991 ರಿಂದ 2022ರ ಅವಧಿಯಲ್ಲಿ ಪ್ರಕರಣ ದಾಖಲಾಗಿ, ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ 50%(ಶೇಕಡಾ ಐವತ್ತರಷ್ಟು ಮಾತ್ರ) ರಿಯಾಯತಿ ನೀಡಿ, 2026ರ ಜೂನ್ 21 ರಿಂದ ಜುಲೈ 10ರ ವರೆಗೆ ಕಾಲಾವಕಾಶ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿರುತ್ತದೆ.

 20 ದಿನಗಳ ನೀಡಿರುವ ಈ ಕಾಲಾವಕಾಶ ಬಳಸಿಕೊಂಡು ವಾಹನಗಳ ಮಾಲೀಕರು ದಂಡ ಪಾವತಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ