ಬೆಂಗಳೂರು: ಸಿಸಿಬಿ ಪೊಲೀಸರು ಬೆಂಗಳೂರಿನ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಓರ್ವ ಮಹಿಳೆಯನ್ನು ಬಂಧಿಸಲಾಗಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.
ಮನೆಗಳನ್ನು ಬಾಡಿಗೆ ಪಡೆದು ಮೊಬೈಲ್ ಮತ್ತು ಆನ್ಲೈನ್ ಮೂಲಕ ಪುರುಷರನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಚಿಕ್ಕಬಾಣಾವರ ಠಾಣಾ ವ್ಯಾಪ್ತಿಯ ರುದ್ರಮ್ಮ ಲೇಔಟ್ ದಾಸಪ್ಪನ ಪಾಳ್ಯದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಬಂಧಿಸಿದ್ದಾರೆ ಎನ್ನಲಾಗಿದೆ.