ಬೆಂಗಳೂರು: ದಾವಣಗೆರೆ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಜಮೀರ್ ಅಹ್ಮದ್ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಸಿ. ಭಾನುಮತಿ ಅವರು ಈ ಮಧ್ಯಂತರ ಪ್ರತಿಬಂಧಕಾಜ್ಞೆ ಆದೇಶ ಹೊರಡಿಸಿದ್ದಾರೆ.
ಜಮೀರ್ ಅಹ್ಮದ್ ಅವರ ವಿರುದ್ಧ ಯಾವುದೇ ರೀತಿಯ ಲೇಖನ, ಆಡಿಯೋ, ವಿಡಿಯೋ ಚಿತ್ರಗಳ ಮುದ್ರಣ, ವಿದ್ಯುನ್ಮಾನ, ಜಾಲತಾಣ, ಡಿಜಿಟಲ್, ಆನ್ಲೈನ್ ವೆಪೋರ್ಟಲ್, ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ, ಅಪ್ಲೋಡ್, ಪೋಸ್ಟ್, ಮರು ಪೋಸ್ಟ್ ಮಾಡಬಾರದು. ಎಂದು ಮಧ್ಯಂತರ ಪ್ರತಿಬಂಧಕ ಆದೇಶದಲ್ಲಿ ನ್ಯಾಯಾಲಯ ನಿರ್ದೇಶನ ನೀಡಿದೆ.
ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆ. 10ಕ್ಕೆ ಮುಂದೂಡಲಾಗಿದೆ.