LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಾಪಟ್ಟಣ ಗ್ಯಾಂಗ್ ರೇಪ್: ಗಂಭೀರವಾಗಿ ಪರಿಗಣಿಸಿದ ಮಹಿಳಾ ಆಯೋಗ, ಅಮಾನುಷ ಕೃತ್ಯದ ತನಿಖೆಗೆ ಎಸ್ಪಿ ಗೆ ಪತ್ರ

ದಾವಣಗೆರೆ: ಬಸವಾಪಟ್ಟಣ ವ್ಯಾಪ್ತಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಎಸ್‌ಪಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.

ಅಮಾನುಷ ಕೃತ್ಯದ ಕುರಿತು ತನಿಖೆ ನಡೆಸುವಂತೆ ಎಸ್ಪಿಗೆ ಪತ್ರ ಬರೆಯಲಾಗಿದೆ. ಬಸವಾಪಟ್ಟಣ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಪ್ರಕರಣವನ್ನು ರಾಜ್ಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ತನಿಖೆ ನಡೆಸಿ ಅತ್ಯಾಚಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಜೂನ್ 3ರಂದು ರಾತ್ರಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಳಿ 41 ವರ್ಷ ವಯಸ್ಸಿನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕ ಸೇರಿ 10 ಜನ ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸಂತ್ರಸ್ತೆಯ ನಗ್ನ ಚಿತ್ರಗಳು ಮತ್ತು ವಿಡಿಯೋಗಳನ್ನು ಆರೋಪಿಗಳು ಸೋಮವಾರ ರಾತ್ರಿ ಬೇರೆಯವರ ಮೊಬೈಲ್ ಗೆ ಹರಿಬಿಟ್ಟಿದ್ದು, ಮನೆಯವರಿಗೆ ವಿಷಯ ಗೊತ್ತಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮದ್ಯ ಸೇವಿಸಿದ್ದ ಪತಿ ಜೊತೆ ಜಗಳವಾಡಿದ ಮಹಿಳೆ ಜೂನ್ 3ರ ರಾತ್ರಿ 7:30ರ ವೇಳೆ ಪಕ್ಕದಲ್ಲಿ ಇರುವ ತವರೂರಿಗೆ ನಡೆದುಕೊಂಡು ಹೋಗುವಾಗ ಸಹಾಯದ ನೆಪದಲ್ಲಿ ಮಾತನಾಡಿಸಿದ ಯುವಕರ ಗುಂಪು ತಂಪು ಪಾನೀಯ ಕುಡಿಯಲು ಕೊಟ್ಟಿದೆ. ಅದನ್ನು ಕುಡಿದ ತಕ್ಷಣ ಪ್ರಜ್ಞೆ ತಪ್ಪಿದ ಮಹಿಳೆಯನ್ನು ಜಮೀನೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೂನ್ 4ರ ಬೆಳಗಿನ ಜಾವ ಎಚ್ಚರವಾದ ಮಹಿಳೆ ತವರಿಗೆ ಹೋಗಿದ್ದು, ನಂತರ ಸಂಬಂಧಿಕರ ಊರಿಗೆ ತೆರಳಿದ್ದರು. ಮೊಬೈಲ್ ಗಳಲ್ಲಿ ವಿಡಿಯೋ ಹರಿದಾಡಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ