LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಡುಪಿ ಕೃಷ್ಣ ಮಠದ ಬಳಿ ತೆಲಂಗಾಣ ಕುಟುಂಬದ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಬಂದಿದ್ದ ತೆಲಂಗಾಣ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಉಡುಪಿಯ ಕೊರಂಗ್ರಪಾಡಿಯ ಸುಪ್ರೀತ್ ಕುಮಾರ್(40) ಬಂಧಿತ ಆರೋಪಿ. ಜೂನ್ 9ರಂದು ಸಂಜೆ ತೆಲಂಗಾಣದ ರಂಗರಾವ್ ಕುಟುಂಬದವರು ಕೃಷ್ಣ ಮಠಕ್ಕೆ ಬಂದಿದ್ದು, ಅವರು ಪಾರ್ಕಿಂಗ್ ಸ್ಥಳದಲ್ಲಿ ಕಾರ್ ನಿಲ್ಲಿಸಿ ದೇವಾಲಯಕ್ಕೆ ಹೋಗಲು ರಸ್ತೆ ದಾಟುವಾಗ ವೇಗವಾಗಿ ಕಾರ್ ಚಾಲನೆ ಮಾಡಿಕೊಂಡು ಬಂದ ಸುಪ್ರೀತ್ ಕುಮಾರ್ ಅವರು ರಂಗರಾವ್ ಮತ್ತು ಅವರ ಕುಟುಂಬದವರ ಮೇಲೆ ಕಾರ್ ಹರಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನಿಧಾನವಾಗಿ ಕಾರು ಚಾಲನೆ ಮಾಡುವಂತೆ ಸುಪ್ರೀತ್ ಕುಮಾರ್ ಗೆ  ರಂಗರಾವ್ ಹೇಳಿದಾಗ ಅವಾಚ್ಯ ಪದಗಳಿಂದ ನಿಂದಿಸಿ ಕಾರ್ ನಲ್ಲಿದ್ದ ಕೋಲು ತಂದು ರಂಗರಾವ್ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಾರೆ. ರಂಗರಾವ್ ಅವರ ತಲೆಗೆ ಗಾಯವಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸುಪ್ರೀತ್ ಕೂಡ ಪ್ರತಿ ದೂರು ದಾಖಲಿಸಿದ್ದು, ಕುಟುಂಬದವರೊಂದಿಗೆ ಕೃಷ್ಣಮಠದ ರಾಜಾಂಗಣ ಪಾರ್ಕಿಂಗ್ ಸಮೀಪ ರಸ್ತೆಯಲ್ಲಿ ಕಾರ್ ಚಲಾಯಿಸಿಕೊಂಡು ಹೋಗುವಾಗ ತೆಲಂಗಾಣ ಕಾರ್ ಚಾಲಕ ತನ್ನ ಕಾರ್ ಗೆ ಡಿಕ್ಕಿ ಹೊಡೆಯಲು ಬಂದಿದ್ದರು. ಈ ಕುರಿತು ಕಾರ್ ಚಾಲಕ ಮತ್ತು ಪ್ರಯಾಣಿಕರನ್ನು ಪ್ರಶ್ನಿಸಿದಾಗ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ತಮ್ಮ ಪತ್ನಿಯ ಮೇಲೆಯೂ ಹಲ್ಲೆ ಮಾಡಿ ಕಾರ್ ನ ಮಿರರ್ ಒಡೆದು ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿ ರಂಗರಾವ್ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಆರೋಪಿ ಸುಪ್ರೀತ್ ಕುಮಾರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ