ಬೆಂಗಳೂರು: ಅಭಿವೃದ್ಧಿಯತ್ತ ಹೆಜ್ಜೆ, ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಒಂದೇ ವಾರಕ್ಕೆ ಮಹತ್ವದ ಸಭೆ ಕರೆದಿದ್ದಾರೆ.
ಜೂನ್ 13 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳ ಜೊತೆಗೆ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೂನ್ 13ರಂದು ಸಭೆ ನಡೆಯಲಿದೆ. ಸಭೆಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆಗೆ ಸಿಎಂ ರಾಜ್ಯದ ಸ್ಥಿತಿಗತಿಯ ಬಗ್ಗೆ ಚರ್ಚೆಸಿ ಕ್ರಮ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಶುರುವಾಗಿರುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕೈಗೊಳ್ಳುವ ಬಗ್ಗೆ, ಬಿತ್ತನೆ ಬೀಜ, ರಸಗೊಬ್ಬರ, ಮಳೆ, ಪ್ರವಾಹ, ಸಮಸ್ಯೆ ಎದುರಿಸಲು ಪೂರ್ವ ಸಿದ್ಧತೆ ಬಗ್ಗೆ ತಮ್ಮ ಆಡಳಿತದಲ್ಲಿ ಎಲ್ಲೂ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲು ಸಿಎಂ ಡಿಕೆ ಹೆಜ್ಜೆ ಇಟ್ಟಿದ್ದಾರೆ.