LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಗೃಹಲಕ್ಷ್ಮಿ’ಯರಿಗೂ ಬಯೋಮೆಟ್ರಿಕ್: ಫಲಾನುಭವಿಗಳ ಅರ್ಜಿ ನವೀಕರಣ ಕಾರ್ಯಕ್ಕೆ ಚಾಲನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ನವೀಕರಣ ಕಾರ್ಯಕ್ಕೆ ಚಾಲನೆ ನೀಡಲಿದ್ದು, ವಾರದಲ್ಲಿ ಗೃಹಲಕ್ಷ್ಮಿಯರಿಗೂ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಹೆಬ್ಬೆಟ್ಟು, ಕಣ್ಣು, ಫೇಸ್ ರೆಕಗ್ನಿಶನ್ ಮೂಲಕ ದೃಢೀಕರಣ ಪಡೆಯಲಾಗುವುದು.

ಕುಟುಂಬದ ತಲಾ ಒಬ್ಬ ಅರ್ಹ ಮಹಿಳೆಗೆ ಮಾಸಿಕ 2,000 ರೂ. ಪಾವತಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ದುರುಪಯೋಗ ತಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಫಲಾನುಭವಿಗಳ ಅರ್ಜಿ ನವೀಕರಣ ಪ್ರಕ್ರಿಯೆಗೆ ವಾರದಲ್ಲಿ ಚಾಲನೆ ನೀಡಲಿದೆ.

ಮೃತಪಟ್ಟವರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುತ್ತಿದೆ. ಆದಾಯ ತೆರಿಗೆ ಪಾವತಿದಾರರೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕ್ರಮ ಕೈಗೊಂಡಿದ್ದು, ಮಾನದಂಡಗಳ ಬಗ್ಗೆ ಚರ್ಚೆ ನಡೆಸಿದೆ.

ಹಳೆಯ ಅರ್ಜಿ ಆಧಾರದಲ್ಲಿಯೇ ನವೀಕರಣ ಪ್ರಕ್ರಿಯೆ ಪೂರ್ಣಗೊಳಿಸುವುದು, ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ, ಮೊಬೈಲ್ ಸಂಖ್ಯೆ ಬದಲಾವಣೆಗೆ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆ ನಡೆದಿದೆ. ಫಲಾನುಭವಿಯ ಬಯೋಮೆಟ್ರಿಕ್ ಪಡೆದು ಅರ್ಜಿ ನವೀಕರಣ ಮಾಡಲಾಗುವುದು. ಬಯೋಮೆಟ್ರಿಕ್ ನಿಂದ ನವೀಕರಣ ಕೆಲವೊಮ್ಮೆ ಸಾಧ್ಯವಾಗದ ಕಾರಣ ರೆಟಿನಾ ಅಥವಾ ಫೇಸ್ ರೆಕಗ್ನಿಷನ್ ಮೂಲಕ ದೃಢೀಕರಣ ಪಡೆಯಲಾಗುವುದು. ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ದೃಢೀಕರಣ ಪತ್ರ ನೀಡಬೇಕು. ಜಾತಿ ಪ್ರಮಾಣ ಪತ್ರದಲ್ಲಿನ ಆರ್ ಡಿ ಸಂಖ್ಯೆ ನಮೂದಿಸಬೇಕಿದೆ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ