ಮಂಗಳೂರು: ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ, ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಳಿಂಜ ಗ್ರಾಮದ ಕುತ್ತೋಡಿ ನಿವಾಸಿ ಸುರೇಶ್(35) ಬಂಧಿತ ಆರೋಪಿ. ಅರಸಿಮಕ್ಕಿ ಗ್ರಾಮದ ಅಂಚೆ ವಿತರಕನಾಗಿದ್ದ ಆರೋಪಿ ಸುರೇಶ್ ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಚಾರ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
2023ರಲ್ಲಿ ಅತ್ಯಾಚಾರ ಎಸಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ್ದ ಬಗ್ಗೆ ಸುರೇಶ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.