LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈನಲ್ಲಿ ಮೂರನೇ ಮದುವೆ ಆಗ್ತಾರಾ ಮಿಸ್ಟರ್ ಪರ್ಫೆಕ್ಟ್‌ಶನಿಸ್ಟ್? ಮುಂಬೈ ಏರ್‌ಪೋರ್ಟ್‌ನಲ್ಲಿ ಕೈ ಕೈ ಹಿಡಿದು ನಡೆದ ಆಮೀರ್ ಖಾನ್-ಗೌರಿ

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಟ್‌ಶನಿಸ್ಟ್ ಅಮೀರ್ ಖಾನ್ ಮತ್ತು ಅವರ ಆಪ್ತ ಗೆಳತಿ ಗೌರಿ ಸ್ಪ್ರ್ಯಾಟ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಮುಂದಿನ ತಿಂಗಳು ಜುಲೈನಲ್ಲಿ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ ಎಂಬ ಸುದ್ದಿಗಳ ನಡುವೆಯೇ ಈ ಏರ್‌ಪೋರ್ಟ್ ವಿಡಿಯೋ ಸಖತ್ ಸೌಂಡ್ ಮಾಡುತ್ತಿದೆ.

ಗುರುವಾರ ಮುಂಜಾನೆ ಮುಂಬೈ ಏರ್‌ಪೋರ್ಟ್ ಟರ್ಮಿನಲ್‌ನಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು, ಪರಸ್ಪರ ಮಾತನಾಡುತ್ತಾ, ನಗುತ್ತಾ ಕ್ಯಾಮೆರಾಗಳಿಗೆ ಪೋಸ್ ನೀಡಿದ್ದಾರೆ. ಈ ವೇಳೆ ಆಮೀರ್ ಖಾನ್ ಕ್ಯಾಶುವಲ್ ಬ್ಲ್ಯಾಕ್ ಟಿ-ಶರ್ಟ್, ಬ್ಲ್ಯಾಕ್ ಕ್ಯಾಪ್ ಧರಿಸಿದ್ದರೆ, ಗೌರಿ ಸ್ಪ್ರ್ಯಾಟ್ ಅವರು ನೇವಿ-ಬ್ಲೂ ಕೋ-ಆರ್ಡ್ ಔಟ್‌ಫಿಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು.

ಜುಲೈ 5 ರಂದು ಸರಳ ವಿವಾಹ?

ಮೂಲಗಳ ಪ್ರಕಾರ, ಈ ಜೋಡಿ ಮುಂದಿನ ತಿಂಗಳು ಜುಲೈ 5 ರಂದು ಅತ್ಯಂತ ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ. ಯಾವುದೇ ಅದ್ದೂರಿ ತನವಿಲ್ಲದೆ, ಮನೆಯಲ್ಲೇ ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಳ್ಳಲು ಇಬ್ಬರೂ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

25 ವರ್ಷಗಳ ಹಳೆಯ ಸ್ನೇಹ

ಕಳೆದ ವರ್ಷವಷ್ಟೇ ಆಮೀರ್ ಖಾನ್ ಮತ್ತು ಗೌರಿ ಸ್ಪ್ರ್ಯಾಟ್ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದರು. ಅಂದಿನಿಂದ ಗೌರಿ ಅವರು ಆಮೀರ್ ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ವಿಶೇಷವೆಂದರೆ, ಈ ಇಬ್ಬರಿಗೂ ಕಳೆದ 25 ವರ್ಷಗಳಿಂದ ಪರಿಚಯವಿದ್ದು, ಈ ದೀರ್ಘಾವಧಿಯ ಸ್ನೇಹ ಇತ್ತೀಚಿನ ವರ್ಷಗಳಲ್ಲಿ ಪ್ರೀತಿಯಾಗಿ ಬದಲಾಗಿದೆ. ಈ ವರ್ಷದ ಆರಂಭದಲ್ಲಿ ತಮ್ಮ 60 ನೇ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಆಮೀರ್ ಖಾನ್ ಅವರು ಗೌರಿ ಅವರನ್ನು ಮಾಧ್ಯಮಗಳಿಗೆ ಅಧಿಕೃತವಾಗಿ ಪರಿಚಯಿಸಿದ್ದರು. ಗೌರಿ ಅವರಿಗೆ 7 ವರ್ಷದ ಮಗನಿದ್ದು, ಅವರು ಚಿತ್ರರಂಗ ಮತ್ತು ಗ್ಲಾಮರ್ ಪ್ರಪಂಚದಿಂದ ದೂರವೇ ಉಳಿದಿದ್ದಾರೆ.

ಆಮೀರ್ ಖಾನ್ ಅವರಿಗೆ ಇದು ಮೂರನೇ ಮದುವೆಯಾಗಲಿದೆ. ಈ ಹಿಂದೆ ಅವರು ರೀನಾ ದತ್ತಾ ಅವರನ್ನು ವಿವಾಹವಾಗಿದ್ದರು, ಈ ದಂಪತಿಗೆ ಜುನೈದ್ ಖಾನ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ರೀನಾ ಅವರೊಂದಿಗೆ 2002 ರಲ್ಲಿ ವಿಚ್ಛೇದನ ಪಡೆದ ನಂತರ, ಆಮೀರ್ 2005 ರಲ್ಲಿ ಕಿರಣ್ ರಾವ್ ಅವರನ್ನು ವಿವಾಹವಾದರು. ಈ ದಂಪತಿಗೆ ಆಜಾದ್ ರಾವ್ ಖಾನ್ ಎಂಬ ಮಗನಿದ್ದಾನೆ. 2021 ರಲ್ಲಿ ಕಿರಣ್ ರಾವ್ ಮತ್ತು ಆಮೀರ್ ಬೇರ್ಪಟ್ಟಿದ್ದರೂ, ಇಂದಿಗೂ ಇಬ್ಬರೂ ಉತ್ತಮ ಸ್ನೇಹಿತರಾಗಿ ಮಗನ ಜವಾಬ್ದಾರಿಯನ್ನು ಜಂಟಿಯಾಗಿ ನಿಭಾಯಿಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ