LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂ ಉದ್ಯೋಗದ ಹೆಸರಲ್ಲಿ ಹಾವೇರಿಯಲ್ಲಿ ನಡೆದ ವಂಚನೆ ಬಳಿಕ ತುಮಕೂರಿನಲ್ಲಿಯೂ ಎಸ್ ಎಲ್ ವಿ ಮಹಿಳಾ ಮಾರ್ಟ್ ನಿಂದ ಕೋಟ್ಯಂತರ ರೂಪಾಯಿ ವಂಚನೆ ಬೆಳಕಿಗೆ

ತುಮಕೂರು: ಹಾವೇರಿಯಲ್ಲಿ ಸ್ವಯಂ ಉದ್ಯೋಗದ ಹೆಸರಿನಲ್ಲಿ ಎಸ್ ಎಲ್ ವಿ ಮಹಿಳಾ ಮಾರ್ಟ್ ಎಂಬ ಕಂಪನಿ ಮಹಿಳೆಯರಿಗೆ 10 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿರುವ ಬೆನ್ನಲ್ಲೇ ತುಮಕೂರಿನಲ್ಲಿಯೂ ಎಸ್ ಎಲ್ ವಿ ಮಹಿಳಾ ಮಾರ್ಟ್ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ತುಮಕೂರು ನಗರದ ಜಯನಗರದಲ್ಲಿ ಶಾಖೆ ತೆರೆದಿದ್ದ ಈ ಸಂಸ್ಥೆಯು, ಗೃಹಿಣಿಯರು ಹಾಗೂ ವಿದ್ಯಾವಂತ ಮಹಿಳೆಯರಿಗೆ ಸ್ವಯಂ ಉದ್ಯೋಗದ ಆಮಿಷ ಒಡ್ಡಿ 5 ಲಕ್ಷ ರೂಪಾಯಿಯಿಂದ ಹಿಡಿದು ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿಸಿಕೊಂಡು ರಾತ್ರೋರಾತ್ರಿ ವಂಚಿಸಿ ಎಸ್ಕೇಪ್ ಆಗಿದೆ. ನೂರಾರು ಮಹಿಳೆಯರು ಹಣ ಕಳೆದುಕೊಂಡು ಬೀದಿಗೆ ಬಿದ್ದಾರೆ.

ಈ ಕಂಪನಿಯು ಮನೆಯಲ್ಲಿಯೇ ಇರುವ ಗೃಹಿಣಿಯರನ್ನು ಗುರಿಯಾಗಿಸಿಕೊಂಡು ವ್ಯವಸ್ಥಿತವಾಗಿ ವಂಚನಾ ಜಾಲ ಹೆಣೆದಿತ್ತು. ಕಂಪನಿಯ ನಿಯಮದ ಪ್ರಕಾರ, ಮಹಿಳೆಯರು ಆರಂಭದಲ್ಲಿ ಮುಂಗಡವಾಗಿ ಲಕ್ಷ ಲಕ್ಷ ಹಣವನ್ನು ಡೆಪಾಸಿಟ್ ಮಾಡಬೇಕಿತ್ತು. ಈ ಡೆಪಾಸಿಟ್ ಮೊತ್ತಕ್ಕೆ ಅನುಗುಣವಾಗಿ ಕಂಪನಿಯು ಮನೆಯಲ್ಲೇ ಪ್ಯಾಕಿಂಗ್ ಮಾಡಲು ಅಗರಬತ್ತಿ, ಕಸದ ಪೊರಕೆ ಹಾಗೂ ಮೇಣದಬತ್ತಿ ಸೇರಿದಂತೆ ವಿವಿಧ ವಸ್ತುಗಳನ್ನು ನೀಡುತ್ತಿತ್ತು. ಮಹಿಳೆಯರು ಇವುಗಳನ್ನು ಪ್ಯಾಕ್ ಮಾಡಿ ಕಂಪನಿಗೆ ವಾಪಸ್ ನೀಡಬೇಕಿತ್ತು. ಪ್ರತಿ ತಿಂಗಳು ಹೂಡಿಕೆ ಮಾಡಿದ ಹಣಕ್ಕೆ ತಕ್ಕಂತೆ ಇಂತಿಷ್ಟು ಸಾವಿರ ರೂಪಾಯಿ ಸಂಬಳ ಹಾಗೂ ಕಂತುಗಳಲ್ಲಿ ಡೆಪಾಸಿಟ್ ಹಣವನ್ನು ವಾಪಸ್ ನೀಡುವುದಾಗಿ ಕಂಪನಿ ನಂಬಿಸಿತ್ತು. ಅಲ್ಲದೆ, ಕಂತುಗಳು ಮುಗಿದ ತಕ್ಷಣ ಪೂರ್ಣ ಡೆಪಾಸಿಟ್ ಹಣ ವಾಪಸ್ ಸಿಗಲಿದೆ, ಇದರಿಂದ ಹೂಡಿಕೆ ಮಾಡಿದ ಹಣ ಕೆಲವೇ ತಿಂಗಳುಗಳಲ್ಲಿ ದುಪ್ಪಟ್ಟಾಗಲಿದೆ ಎಂದು ನಂಬಿಸಲಾಗಿತ್ತು.

ಒಂದು ವರ್ಷದಿಂದ ತುಮಕೂರಿನಲ್ಲಿ ಈ ಕಂಪನಿ ಆರಂಭವಾಗಿತ್ತು. ಏಪ್ರಿಲ್ ತಿಂಗಳವರೆಗೂ ಮಹಿಳೆಯರಿಂದ ಲಕ್ಷ ಲಕ್ಷ ರೂಪಾಯಿ ಹಣವನ್ನು ಠೇವಣಿ ರೂಪದಲ್ಲಿ ಪಡೆದುಕೊಂಡಿದ್ದ ಕಂಪನಿ, ತದನಂತರ ದಿಢೀರನೆ ತನ್ನ ವಹಿವಾಟನ್ನು ಸ್ಥಗಿತಗೊಳಿಸಿ ಕಚೇರಿಗೆ ಬಾಗಿಲು ಹಾಕಿದೆ. ಮೋಸ ಹೋಗಿರುವುದು ಗೊತ್ತಾಗಿ ಮಹಿಳೆಯರು ಹಲವು ಬಾರಿ ಕಚೇರಿಗೆ ಅಲೆದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಹಾವೇರಿ ವಂಚನೆ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕೆಲವು ಸಂತ್ರಸ್ತರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಎಸ್ ಎಲ್ ವಿ ಕಂಪನಿ ಸ್ವಯಂ ಉದ್ಯೋಗದ ಹೆಸರಲ್ಲಿ ರಾಜ್ಯಾದ್ಯಂತ ಇದೇ ರೀತಿ ವಂಚಿಸಿರುವ ಶಂಕೆವಾಗಿದೆ. ಈ ನಿಟ್ತಿನಲ್ಲಿಯೂ ತನಿಖೆ ಆರಂಭವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ