LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಂಭತ್ತು ತಿಂಗಳ ಕಂಟಕದ ಬಗ್ಗೆ ಚಿಂತೆ ಬೇಡ; ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಯಾವುದೇ ಕಂಟಕವಿಲ್ಲ: ಭವಿಷ್ಯ ನುಡಿದ ನೊಣವಿನಕೆರೆ ಸ್ವಾಮೀಜಿ

ತುಮಕೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಯಾವುದೇ ಕಂಟಕವಿಲ್ಲ ಎಂದು ನೊಣವಿನಕೆರೆ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ತುಮಕೂರಿನಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ಪಾದಪೂಜೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಗುರುವಿನ ಆಶಿರ್ವಾದ ಪಡೆದಿದ್ದಾರೆ. ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಗುರುವಿನ ಆಶಿರ್ವಾದ ಅವರಿಗೆ ರಕ್ಷಾಕವಚವಾಗಲಿದೆ ಎಂದು ತಿಳಿಸಿದರು.

ಯಾವುದೇ ಕಂಟಕಬಂದರೂ ಅವರು ಜಯಶೀಲರಾಗುತ್ತಾರೆ. ಒಂಭತ್ತು ತಿಂಗಳ ಕಂಟಕದ ಬಗ್ಗೆ ಚಿಂತೆಬೇಡ. ಗುರುವಿನ ರಕ್ಷಣೆಯಿಂದ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಲಿವೆ ಎಂದು ತಿಳಿಸಿದ್ದಾರೆ.

ಡಿ,ಕೆ.ಶಿವಕುಮಾರ್ ಅವರು, ರೈತರು, ಬಡವರು, ಸೈನಿಕರು, ವರ್ತಕರು ಹಾಗೂ ಯುವಕರಿಗಾಗಿ ಕಂಕಣಬದ್ಧವಾಗಿ ಸೇವೆ ಸಲ್ಲಿಸಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಮಂತ್ರದೊಂದಿಗೆ ಶ್ರೀಮಠದಿಂದ ಅವರಿಗೆ ಧರ್ಮದ ದಂಡವನ್ನು ಹಸ್ತಾಂತರಿಸಲಾಗಿದೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಸಮಾಜದ ಸೇವೆಯಲ್ಲಿ ತಮ್ಮ ಬದುಕನ್ನು ರೂಪಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ