LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಕ್ಸ್‌ಆಫೀಸ್‌ನಲ್ಲಿ ಹೇಗಿದೆ ಪೆದ್ದಿ ಆಟ? ಮೊದಲ ವಾರದ ಗಳಿಕೆ ಎಷ್ಟು?

ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ನಿರ್ದೇಶಕ ಬುಚ್ಚಿಬಾಬು ಸನಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಪೆಡ್ಡಿ’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಗ್ರಾಮೀಣ ಹಿನ್ನೆಲೆಯ ಕ್ರೀಡಾ ಸಾಹಸ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರವು ಬಿಡುಗಡೆಯಾದ ಮೊದಲ ವಾರದಲ್ಲೇ ವಿಶ್ವದಾದ್ಯಂತ ಬರೋಬ್ಬರಿ 345 ಕೋಟಿ ರೂಪಾಯಿ ಒಟ್ಟು (ಗ್ರಾಸ್) ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ ಎಂದು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ.

ಚಿತ್ರ ಬಿಡುಗಡೆಗೆ ಮುನ್ನ ಹಾಗೂ ನಂತರ ಕೆಲವು ವಿವಾದಗಳು ಮತ್ತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಮಾತ್ರ ಚಿತ್ರಮಂದಿರಗಳತ್ತ ಮುಖ ಮಾಡುತ್ತಿರುವುದು ಕಲೆಕ್ಷನ್ ಮೂಲಕ ಸಾಬೀತಾಗಿದೆ. ಈ ಭರ್ಜರಿ ಯಶಸ್ಸಿನೊಂದಿಗೆ ‘ಪೆದ್ದಿ’ ಸಿನಿಮಾವು ಪ್ರಸಕ್ತ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ದಕ್ಷಿಣ ಭಾರತದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಚಿತ್ರದ ಈ ಅದ್ಭುತ ಕಲೆಕ್ಷನ್ ವೇಗವನ್ನು ಹೀಗೆಯೇ ಮುಂದುವರಿಸಲು ಚಿತ್ರತಂಡ ಹೊಸ ಮಾಸ್ಟರ್ ಪ್ಲಾನ್ ಮಾಡಿದೆ. ಪ್ರಮುಖ ನಗರಗಳಲ್ಲಿ ಟಿಕೆಟ್ ದರವನ್ನು ಕಡಿತಗೊಳಿಸಲಾಗಿದ್ದು, ಇದರಿಂದಾಗಿ ಕೌಟುಂಬಿಕ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಥಿಯೇಟರ್‌ಗೆ ಬರುವಂತಾಗಿದೆ. ಇದರ ಜೊತೆಗೆ, ಚಿತ್ರದ ನಿರೂಪಣೆಯನ್ನು ಮತ್ತಷ್ಟು ರೋಮಾಂಚನಗೊಳಿಸಲು ಎಡಿಟಿಂಗ್ ವೇಳೆ ಕತ್ತರಿಸಲಾಗಿದ್ದ ಕೆಲವು ಪ್ರಮುಖ ಮತ್ತು ಆಕರ್ಷಕ ದೃಶ್ಯಗಳನ್ನು ಚಿತ್ರಮಂದಿರದ ಪ್ರದರ್ಶನದಲ್ಲಿ ಮರುಸೇರ್ಪಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಇದು ಅಭಿಮಾನಿಗಳಿಗೆ ಸಿನಿಮಾ ಮರುವೀಕ್ಷಣೆ ಮಾಡಲು ಬಿಗ್ ಆಫರ್ ಸಿಕ್ಕಂತಾಗಿದೆ.

ಚಿತ್ರದಲ್ಲಿ ರಾಮ್ ಚರಣ್ ಅವರ ರಗಡ್ ಮತ್ತು ಪವರ್‌ಫುಲ್ ನಟನೆಗೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಇನ್ನುಳಿದಂತೆ ಜಾನ್ವಿ ಕಪೂರ್, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಜಗಪತಿ ಬಾಬು, ದಿವ್ಯೇಂದು ಶರ್ಮಾ ಮತ್ತು ಬೊಮನ್ ಇರಾನಿ ಅವರಂತಹ ಬಲಿಷ್ಠ ತಾರಾಗಣ ಈ ಚಿತ್ರದಲ್ಲಿದೆ. ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿರಲು ಈ ಬಿಗ್ ಬಜೆಟ್ ಚಿತ್ರವನ್ನು ನಿರ್ಮಿಸಿದ್ದು, ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಅವರ ಸಂಗೀತ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ