LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತರಿಗೆ ಮಹತ್ವದ ಸೂಚನೆ: ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

ಉಡುಪಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನಾಳೆ ಜೂನ್ 12ರಂದು ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ.

ಸಿಎಂ ಜೋಸೆಫ್ ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ.

ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೇವಲ ದೇವಿಯ ದರ್ಶನ ಮತ್ತು ವಿಶೇಷ ಪೂಜೆಗಾಗಿ ಮಾತ್ರ ಕೊಲ್ಲೂರಿಗೆ ಆಗಮಿಸುತ್ತಿದ್ದು, ಪೂಜೆಯ ಬಳಿಕ ನಾಳೆಯೇ ತಮಿಳುನಾಡಿಗೆ ಹಿಂದಿರುಗಲಿದ್ದಾರೆ. ಈ ಪ್ರವಾಸದ ವೇಳೆ ಅವರ ಯಾವುದೇ ಸಾರ್ವಜನಿಕ ಭೇಟಿ ಅಥವಾ ರಾಜಕೀಯ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಭಕ್ತರ ದರ್ಶನದ ಸಮಯ ಬದಲಾವಣೆ:

ವಿವಿಐಪಿ ಭೇಟಿ ಮತ್ತು ವಿಶೇಷ ಭದ್ರತಾ ಹಿತದೃಷ್ಟಿಯಿಂದ ಜೂನ್ 12ರ ಮಧ್ಯಾಹ್ನ 12:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಭಕ್ತಾದಿಗಳು ದೇವಸ್ಥಾನಕ್ಕೆ ಬರುವುದನ್ನು ಮತ್ತು ದರ್ಶನ ಪಡೆಯುವುದನ್ನು ತಪ್ಪಿಸುವುದು ಸೂಕ್ತ ಎಂದು ಹೇಳಲಾಗಿದೆ.

ಭಕ್ತಾದಿಗಳಿಗೆ ಯಾವುದೇ ಸಮಯದಲ್ಲಿ ದೇವಸ್ಥಾನ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿಲ್ಲ. ಆದರೆ, ಸಿಎಂ ಭೇಟಿಯ ಭದ್ರತಾ ತಪಾಸಣೆಗಳ ಕಾರಣದಿಂದಾಗಿ ಸಾಮಾನ್ಯ ದರ್ಶನದ ವೇಳೆ ಭಕ್ತರಿಗೆ ತೀವ್ರ ಅನಾನುಕೂಲ ಹಾಗೂ ವಿಳಂಬವಾಗಬಹುದು.

ಮುಖ್ಯಮಂತ್ರಿಗಳ ವಾಹನ ಸಂಚಾರದ ಕಾನ್ವಾಯ್ ಸಾಗುವ ಹಾದಿ, ದೇವಸ್ಥಾನದ ಮುಖ್ಯ ಪ್ರವೇಶ ದ್ವಾರಗಳು ಹಾಗೂ ಮೂಕಾಂಬಿಕಾ ದೇವಸ್ಥಾನದ ಒಳಗಿನ ಆವರಣದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಗುಂಪು ಸೇರುವುದು ಅಥವಾ ಜನಸಂದಣಿ ಉಂಟುಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಹೈ-ಪ್ರೊಫೈಲ್ ಬಂದೋಬಸ್ತ್ ಇರುವುದರಿಂದ ಕೊಲ್ಲೂರಿಗೆ ಬರುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಮತ್ತು ಅನಾನುಕೂಲಗಳನ್ನು ತಪ್ಪಿಸಲು ತಮ್ಮ ದರ್ಶನದ ಸಮಯವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ