LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್ ಮತ್ತು ಪೋಸ್ಟ್‌ಗಳು ಫೇಸ್‌ಬುಕ್ ಸೇರಿದಂತೆ ಹಲವು ಕಡೆ ಭಾರಿ ವೈರಲ್ ಆಗಿವೆ. ಇದನ್ನು ಗಮನಿಸಿದ ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಆತ್ಮೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದೀಗ ಈ ಬಗ್ಗೆ ಸ್ವತಃ ದೊಡ್ದಣ್ಣ ಸ್ಪಷ್ಟನೆ ನೀಡಿದ್ದಾರೆ.

‘ಪಬ್ಲಿಕ್ ಫ್ರೆಂಡ್​’ ಹೆಸರಿನ ಫೇಸ್​​ಬುಕ್​​ ಪೇಜ್​​​ನಲ್ಲಿ ‘ದೊಡ್ಡಣ್ಣ ಇನ್ನಿಲ್ಲ’ ಎಂದು ಪೋಸ್ಟ್ ಹಾಕಲಾಗಿದೆ. ಮರಣ ಎಂದು ಜೂನ್ 12ರ ಡೇಟ್ ಹಾಕಲಾಗಿದೆ. ‘ನಿಮ್ಮ ಅಭಿನಯ, ನಿಮ್ಮ ಸಾಧನೆ ಯಾವಾಗಲೂ ನಮ್ಮ ಜೊತೆ ಇರುತ್ತದೆ’ ಎಂದು ನೆನಪಿಸಿಕೊಳ್ಳಲಾಗಿದೆ. ಇದನ್ನು ನೋಡಿದ ದೊಡ್ದಣ್ಣ ಶಾಕ್ ಆಗಿದ್ದಾರೆ. ತಾನು ಬದುಕಿದ್ದಾಗಲೇ ಶ್ರದ್ಧಾಂಜಲಿ ಸಲ್ಲಿಸಿರುವ ಹಾಗೂ ಸುಳ್ಳು ಸುದ್ದಿ ಹರಡಿರುವವರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ದೊಡ್ದಣ್ಣ, ನಾನು ಸತ್ತಿಲ್ಲ. ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮನೆಯಲ್ಲಿ ಆರಾಮಾಗಿ ಟೀ ಕುಡಿಯುತ್ತಾ, ಟಿವಿ ನೋಡುತ್ತಾ ಕುಳಿತಿದ್ದೇನೆ. ನನಗೇನೂ ಆಗಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶ್ರದ್ಧಾಂಜಲಿಯ ಪೋಸ್ಟರ್ ಸಂಪೂರ್ಣವಾಗಿ ನಕಲಿ ಮತ್ತು ಎಡಿಟೆಡ್ ಆಗಿದ್ದು, ಇಂತಹ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಹಿರಿಯ ನಟರ ಆರೋಗ್ಯದ ಬಗ್ಗೆ ಪದೇ ಪದೇ ಇಂತಹ ವಿ ಸುಳ್ಳು ಸುದ್ದಿ ಹಬ್ಬಿಸಿ ವಿಕೃತಿ ಮೆರೆಯುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ