LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳೇ ಗಮನಿಸಿ ; ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

ಬಳ್ಳಾರಿ :  ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ದ್ವಿತೀಯ ವರ್ಷದ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಐ.ಟಿ.ಐ ಮತ್ತು ದ್ವಿತೀಯ ಪಿ.ಯು.ಸಿ(ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಅರ್ಜಿಗಳನ್ನು ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 20 ರೊಳಗೆ ಸಲ್ಲಿಸಬಹುದು.

ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್: ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಅಂಡ್ ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಮೆಟಲರ್ಜಿಕಲ್ ಇಂಜಿನಿಯರಿಗ್ ವಿಭಾಗಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.

ಜೂನ್ 23 ರಂದು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಜೂ.25 ರ ವರೆಗೆ ತಿದ್ದುಪಡಿಗೆ ಅವಕಾಶ, ಜೂ.30 ರಂದು ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜುಲೈ 01 ರಿಂದ 04 ರೊಳಗೆ ಪ್ರವೇಶ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-294371 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟ್ರಿಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿಗೆ ಪೋಸ್ಟ್ ಡಿಪ್ಲೋಮಾ ಇಂಡಸ್ಟ್ರಿಯಲ್ ಸೇಫ್ಟಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಇದೇ ಪಾಲಿಟೆಕ್ನಿಕ್ ಕಾಲೇಜ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 23 ಸಂಜೆ 05 ಗಂಟೆಯೊಳಗೆ ಸಲ್ಲಿಸಬಹುದು.ಜೂನ್ 25 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಜೂ.27 ರ ಸಂಜೆ 03 ರ ವರೆಗೆ ತಿದ್ದುಪಡಿಗೆ ಅವಕಾಶ, ಅದೇ ಸಂಜೆ 05 ಗಂಟೆಯವರೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 29 ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ.ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-294371 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ