ನವದೆಹಲಿ: ರಾಜ್ಯಸಭಾ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಮೀನಾಕ್ಷಿ ನಟರಾಜನ್ ಗೆ ಹಿನ್ನಡೆಯಾಗಿದೆ.
ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಪ್ಪಾಗಿ ತಿರಸ್ಕರಿಸಿದ್ದಾರೆ ಎಂದು ಅವರು ವಾದಿಸಿದರು. ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು ಬಹಿರಂಗಪಡಿಸದ ಕಾರಣ ಅವರು ಅದನ್ನು ತಪ್ಪಾಗಿ ತಿರಸ್ಕರಿಸಿದ್ದಾರೆ ಎಂದು ಮೀನಾಕ್ಷಿ ನಟರಾಜನ್ ಪರ ವಕೀಲ ಅಭಿಷೇಕ್ ಸಿಂಘ್ವಿ, ವಾದ ಮಂಡಿಸಿದರು. ಅಭ್ಯರ್ಥಿಗಳು ಕನಿಷ್ಠ ಎರಡು ವರ್ಷಗಳ ಶಿಕ್ಷೆ ವಿಧಿಸಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಮಾತ್ರ ಬಹಿರಂಗಪಡಿಸಬೇಕಾಗುತ್ತದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಸಮನ್ಸ್ ಮಾತ್ರ ಜಾರಿ ಮಾಡಲಾಗಿದೆ ಎಂದು ವಾದಿಸಿದರು.
ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ ನಟರಾಜನ್ ಅರ್ಜಿ ವಜಾಗೊಳಿಸಿದೆ.
ಚುನಾವಣಾ ನಿಯಮಾವಳಿಗಳ ನಿಖರವಾದ ಪಾಲನೆಯು ಪ್ರಜಾಪ್ರಭುತ್ವದ ಅಡಿಪಾಯವನ್ನು ಗಟ್ಟಿಗೊಳಿಸುತ್ತದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪು ಭವಿಷ್ಯದ ಎಲ್ಲಾ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರ ಸಲ್ಲಿಕೆಯ ವೇಳೆ ತಾಂತ್ರಿಕ ಮತ್ತು ಕಾನೂನು ಅಂಶಗಳನ್ನು ಮತ್ತಷ್ಟು ಪಾರದರ್ಶಕವಾಗಿ ನಿರ್ವಹಿಸಲು ಒಂದು ಸ್ಪಷ್ಟವಾದ ದಿಕ್ಸೂಚಿಯಾಗಿದೆ.