LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಮತ್ತೊಂದು ಬೆಂಕಿ ಅವಘಡ: ಮೂವರು ಸಜೀವದಹನ

ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಸಂಭವಿಸುದ ಭೀಕರ ಬೆಂಕಿ ದುರಂತದಲ್ಲಿ ಮೂವರು ಸಜೀವದಹನವಾಗಿರುವ ಘಟನೆ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನಡೆದಿದೆ.

22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಇಂದು ಮುಂಜಾನೆ 2:30 ರ ಸುಮಾರಿಗೆ ತುಘಲಕಾಬಾದ್‌ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ನೆಲಮಹಡಿ ಸೇರಿದಂತೆ ಒಟ್ಟು ಐದು ಮಹಡಿಗಳಿರುವ ಈ ವಸತಿ ಸಂಕೀರ್ಣದ ಪಾರ್ಕಿಂಗ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಸದ್ಯದ ಮಾಹಿತಿಯ ಪ್ರಕಾರ ನೆಲಮಹಡಿಯಲ್ಲಿ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಅಲ್ಲಿ ಚಾರ್ಜ್ ಮಾಡಲಾಗುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ಪಾರ್ಕ್ ಮಾಡಲಾಗಿದ್ದ ಏಳು ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಟ್ಟಡದ ಮೆಟ್ಟಿಲುಗಳು ಸೇರಿದಂತೆ ಎಲ್ಲಾ ಕಡೆ ದಟ್ಟವಾದ ಹೊಗೆ ಹರಡಿಕೊಂಡಿದೆ. ಇದರಿಂದಾಗಿ ಕಟ್ಟಡದಲ್ಲಿದ್ದ ನಿವಾಸಿಗಳು ಹೊರಬರಲಾಗದೇ ಅಲ್ಲೇ ಸಿಲುಕಿಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಪೊಲೀಸರು, 4 ಅಗ್ನಿಶಾಮಕ ದಳದ ವಾಹನಗಳು ಹಾಗೂ ಅಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಕಟ್ಟಡದಲ್ಲಿ ಸಿಲುಕಿಕೊಂಡಿದ್ದ 8 ಜನರನ್ನು ರಕ್ಷಿಸಿ ಕೂಡಲೇ ಸಫ್ದರ್ಜಂಗ್ ಆಸ್ಪತ್ರೆ ಮತ್ತು ಏಮ್ಸ್ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ