LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಪ್ರಕಾಶ್ ರಾಜ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಶ್ರೀರಾಮಸೇನೆ ಆಕ್ರೋಶ

ಬೆಳಗಾವಿ: ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರಾಜ್ ಹೆಸರು ಉಲ್ಲೇಖ ಮಾಡಿರುವ ಬೆನ್ನಲ್ಲೇ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಶ್ರೀರಾಮಸೇನೆ ಕಾರ್ಯಕರ್ತರು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಕಾಶ್ ರಾಜ್ ಹಿಂದೂ ಧರ್ಮದ ವಿರೋಧಿ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಪ್ರಕಾಶ್ ರಾಜ್ ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ರಾಜ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಯಿತು. ಪ್ರಕಾಶ್ ರಾಜ್ ಧರ್ಮದ್ರೋಹಿ ಎಂಬ ಘೋಷಣೆಗಳನ್ನೂ ಕೂಗಿ ಕಿಡಿಕಾರಿದರು.

ಧರ್ಮಸ್ಥಳ ಪ್ರಕರಣ ಸಂಬಂಧ ಬುರುಡೆ ಗ್ಯಾಂಗ್‌ನ ಷಡ್ಯಂತ್ರವನ್ನು ರಿಟ್‌ ಅರ್ಜಿಯಲ್ಲಿ ಉಲ್ಲೇಖಿಸಿರುವ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ನಟ ಪ್ರಕಾಶ್‌ ರಾಜ್‌ ಹೆಸರನ್ನೂ ಸಹ ಚಿನ್ನಯ್ಯ ಉಲ್ಲೇಖ ಮಾಡಿದ್ದಾನೆ. ತಲೆ ಬುರುಡೆ ನೀಡಿ ಪೊಲೀಸರಿಗೆ ದೂರು ಕೊಟ್ಟ ಬಳಿಕ ಕೇರಳದ ರೆಸಾರ್ಟ್‌ಗೆ ಕರೆದೊಯ್ದರು. ಅಲ್ಲಿ ರಾತ್ರಿ 8 ಗಂಟೆಗೆ ನಟ ಪ್ರಕಾಶ್ ರಾಜ್ ಅವರಿಗೆ ಕರೆ ಮಾಡಿ ಅರ್ಜಿದಾರರಿಗೆ ಫೋನ್ ನೀಡಿದರು. ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ಮಾತನಾಡಿ ಗಿರೀಶ್ ಮಟ್ಟಣ್ಣನವರ್ ಹೇಳಿಕೊಟ್ಟಂತೆ ಹೇಳಿಕೆ ನೀಡಬೇಕು. ತಾವು 29 ನೇ ತಾರೀಕಿಗೆ ಬಂದು ಅಪ್ಪಿಕೊಳ್ಳುವುದಾಗಿ ಹೇಳಿದರು.

ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದಾಗ ಸಂಭ್ರಮಿಸಿ ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸುವ ಸಮಯ ಬಂದಿತೆಂದು ಸಂಭ್ರಮಿಸಿದರು. ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣವರ್ ಬಂಗ್ಲೆಗುಡ್ಡದ ಸ್ಥಳ ಗುರುತಿಸಿ ಅಲ್ಲಿ ಉತ್ಖನನ ನಡೆಸಿ ಸರ್ಕಾರದ ಹಣ ವ್ಯಯ ಮಾಡಿಸುವಂತೆ ಸೂಚಿಸಿದರು. ಯೋಜನೆಯ ಬಜೆಟ್ 200 ಕೋಟಿ ಇದ್ದು, ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸಲು ಸಹಕರಿಸಿದರೆ 50 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದರು. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಅವರು ಹೇಳಿದ ಜಾಗಗಳನ್ನು ಎಸ್ ಐಟಿಗೆ ತೋರಿಸುವಂತೆ ಸೂಚಿಸಿ, ಹಾಗೆ ಮಾಡದಿದ್ದರೆ ತಮ್ಮ ಪತ್ನಿಯನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಆದರೆ ಅಲ್ಲಿ ಯಾವುದೇ ಶವದ ಅವಶೇಷ ಸಿಗಲಿಲ್ಲ. ಧರ್ಮಸ್ಥಳದ ವಿರುದ್ಧ ಇವರ ಷಡ್ಯಂತ್ರದಿಂದ ಭೀತನಾಗಿ ಸತ್ಯ ಹೇಳಲು ತೀರ್ಮಾನಿಸಿದೆ. ನಂತರ ಎಸ್ ಐಟಿ ಮುಂದೆ ಷಡ್ಯಂತ್ರದ ಹೇಳಿಕೆ ನೀಡಿದೆ ಎಂದು ಚಿನ್ನಯ್ಯ ಉಲ್ಲೇಖಿಸಿದ್ದಾನೆ. ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ