LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಟ್ರಾಫಿಕ್‌ಗೆ ಹೊಸ ಪ್ಲ್ಯಾನ್: ಸುರಕ್ಷತೆ, ನಿಯಮ ಜಾರಿ ಮತ್ತು ಪೊಲೀಸರ ಕಾರ್ಯಕ್ಷಮತೆಗೆ ಒತ್ತು

ಬೆಂಗಳೂರು: ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಸಮಗ್ರ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆ ಸಚಿವ Priyank Kharge ತಿಳಿಸಿದ್ದಾರೆ.

ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಸಚಿವರ ಭೇಟಿ

ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ನಗರದ ಟ್ರಾಫಿಕ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ವಿವಿಧ ಮಾಹಿತಿಗಳನ್ನು ಪಡೆದುಕೊಂಡರು. ಈ ವೇಳೆ ಟ್ರಾಫಿಕ್ ನಿಯಂತ್ರಣ ವ್ಯವಸ್ಥೆ, ತಂತ್ರಜ್ಞಾನ ಆಧಾರಿತ ಮೇಲ್ವಿಚಾರಣೆ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಆಧುನಿಕ ತಂತ್ರಜ್ಞಾನದಿಂದ ಟ್ರಾಫಿಕ್ ನಿರ್ವಹಣೆ

ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಂಚಾರ ದಟ್ಟಣೆ ನಿಯಂತ್ರಣ, ಅಪಘಾತಗಳ ತಡೆ ಹಾಗೂ ಸಂಚಾರ ನಿಯಮಗಳ ಪರಿಣಾಮಕಾರಿ ಜಾರಿಗೆ ಹೊಸ ತಂತ್ರಜ್ಞಾನಗಳ ಬಳಕೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಸೂಚಿಸಿದರು.

ಬೆಂಗಳೂರು ವಾಹನಗಳ ಬೆಳವಣಿಗೆ ದರ 10%

ಹಿರಿಯ ಪೊಲೀಸ್ ಅಧಿಕಾರಿಗಳು ಸಚಿವರಿಗೆ ನೀಡಿದ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಜನಸಂಖ್ಯೆಯ ವಾರ್ಷಿಕ ಬೆಳವಣಿಗೆ ದರ 3.7% ಇದ್ದರೆ, ವಾಹನಗಳ ಸಂಖ್ಯೆಯ ಬೆಳವಣಿಗೆ ದರ ಸುಮಾರು 10% ಇದೆ. ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು, ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಅಧಿಕಾರಿಗಳು ವಿವರಿಸಿದರು.

53 ಟ್ರಾಫಿಕ್ ಪೊಲೀಸ್ ಠಾಣೆಗಳು, 14 ಸಾವಿರ ಕಿ.ಮೀ ರಸ್ತೆ ಜಾಲ

ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಟ್ರಾಫಿಕ್ ಪೊಲೀಸ್ ವ್ಯವಸ್ಥೆಯು 53 ಪೊಲೀಸ್ ಠಾಣೆಗಳನ್ನು ಹೊಂದಿದೆ. ಸುಮಾರು 1.25 ಕೋಟಿ ನೋಂದಾಯಿತ ವಾಹನಗಳಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸರು ಸುಮಾರು 14,000 ಕಿಲೋಮೀಟರ್ ರಸ್ತೆ ಜಾಲದ ಸಂಚಾರ ನಿರ್ವಹಣೆಯ ಹೊಣೆ ಹೊತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕ್ಯಾಮೆರಾ ಟ್ರ್ಯಾಕಿಂಗ್ ವಿಭಾಗ ವೀಕ್ಷಣೆ

ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಚಾರ ಪೊಲೀಸ್ ವಸ್ತುಸಂಗ್ರಹಾಲಯವನ್ನು ವೀಕ್ಷಿಸಿದರು. ಇದರ ಜೊತೆಗೆ ಕ್ಯಾಮೆರಾ ಟ್ರ್ಯಾಕಿಂಗ್ ವಿಭಾಗಕ್ಕೆ ಭೇಟಿ ನೀಡಿ, ಅಲ್ಲಿನ ಕಾರ್ಯಾಚರಣೆ ಹಾಗೂ ತಂತ್ರಜ್ಞಾನ ಆಧಾರಿತ ಸಂಚಾರ ಮೇಲ್ವಿಚಾರಣೆಯ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಟ್ರಾಫಿಕ್ ನಿರ್ವಹಣೆಗೆ ಹೊಸ ಒತ್ತು

ನಗರದಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಹಾಗೂ ಸಂಚಾರ ಒತ್ತಡವನ್ನು ಗಮನದಲ್ಲಿಟ್ಟುಕೊಂಡು, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ಹೆಚ್ಚಿಸುವುದು, ತಂತ್ರಜ್ಞಾನ ಬಳಕೆ ವಿಸ್ತರಿಸುವುದು ಮತ್ತು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಆದ್ಯತೆ ನೀಡುವ ದಿಸೆಯಲ್ಲಿ ಸರ್ಕಾರ ಮುಂದಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ