LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವೈದ್ಯಕೀಯ ಕೋರ್ಸ್ ಶುಲ್ಕ ಈ ವರ್ಷ ಹೆಚ್ಚಳ ಮಾಡದಿರಲು ಸರ್ಕಾರ ನಿರ್ಧಾರ

ಬೆಂಗಳೂರು: ಈ ವರ್ಷ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಿಸದಿರಲು ಸರ್ಕಾರ ನಿರ್ಧರಿಸಿದ್ದು, ಕಳೆದ ವರ್ಷದ ಶುಲ್ಕವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಶುಲ್ಕ ಹೆಚ್ಚಳ ಇರುವುದಿಲ್ಲ. ಹಿಂದಿನ ವರ್ಷದ ಶುಲ್ಕವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿ ಪ್ರತಿನಿಧಿಗಳೊಂದಿಗೆ ಸಚಿವರು ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿನ ಖಾಸಗಿ ಕಾಲೇಜು ಆಡಳಿತ ಮುಂಡಳಿಗಳು ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಇಡಲು ಮುಂದಾಗಿದ್ದರೂ ನಾವು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ನೀಟ್ ಪರೀಕ್ಷೆ ರದ್ದಾಗಿ ಮರು ಪರೀಕ್ಷೆ ನಡೆಯಬೇಕಿರುವುದರಿಂದ ಪೋಷಕರು, ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲವೆಂದು ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ಸಾಲಿನಲ್ಲಿ ನಿಗದಿಪಡಿಸಿದ್ದ ಶುಲ್ಕವನ್ನು ಈ ಸಾಲಿನಲ್ಲೂ ಮುಂದುವರಿಸಲಿದ್ದು, ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ವೈದ್ಯಕೀಯ ಕೋರ್ಸ್ ಶುಲ್ಕ ವಿವರ:

ಸರ್ಕಾರಿ ಕಾಲೇಜು – 55,000 ರೂ.

ಕೆಪಿಸಿಎಫ್‌ ಸರ್ಕಾರಿ ಕೋಟಾ – 1,41,621 ರೂ.

ಕೆಆರ್‌ಎಲ್‌ಎಂಪಿಸಿಎ ಸರ್ಕಾರಿ ಕೋಟಾ – 1,41,621 ರೂ.

ಎಎಂಪಿಸಿಕೆ ಸರ್ಕಾರಿ ಕೋಟಾ – 1,41,621 ರೂ.

ಖಾಸಗಿ ವಿವಿ:

ಸರ್ಕಾರಿ ಕೋಟಾ 1,41,621 ರೂ.

ಕೆಪಿಸಿಎಫ್‌ ಖಾಸಗಿ ಕೋಟಾ – 11,88,167 ರೂ.

ಕೆಆರ್‌ಎಲ್‌ಎಂಪಿಸಿಎ ಖಾಸಗಿ ಕೋಟಾ – 11,88,167 ರೂ.

ಎಎಂಪಿಸಿಕೆ ಖಾಸಗಿ ಕೋಟಾ – 11,88,167 ರೂ.

ದಂತ ವೈದ್ಯಕೀಯ:

ಸರ್ಕಾರಿ ಕಾಲೇಜುಗಳ ಕೋಟಾ – 40,000 ರೂ.

ಕೆಪಿಸಿಎಫ್‌ ಸರ್ಕಾರಿ ಕೋಟಾ – 83,358 ರೂ.

ಕೆಆರ್‌ಎಲ್‌ಎಂಪಿಸಿಎ ಸರ್ಕಾರಿ ಕೋಟಾ – 83,358 ರೂ.

ಎಎಂಪಿಸಿಕೆ ಸರ್ಕಾರಿ ಕೋಟಾ – 83,358 ರೂ.

ಖಾಸಗಿ ಕೋಟಾ:

ಕೆಪಿಸಿಎಫ್‌ ಖಾಸಗಿ ಕೋಟಾ – 7,32,625 ರೂ.

ಕೆಆರ್‌ಎಲ್‌ಎಂಪಿಸಿಎ ಖಾಸಗಿ ಕೋಟಾ – 7,32,625 ರೂ.

ಎಎಂಪಿಸಿಕೆ ಖಾಸಗಿ ಕೋಟಾ – 7,32,625 ರೂ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ