ಮೈಸೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಜವರೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಜವರೇಗೌಡನ ಕೊಪ್ಪಲು ಗ್ರಾಮದ ಪ್ರಿಯಾಂಕಾ(26) ಆತ್ಮಹತ್ಯೆಗೆ ಯತ್ನಿಸಿದ ತಾಯಿ. ತನ್ನ ಮಕ್ಕಳಾದ ದೃತಿ(3), ದಿಶಾ(1.5) ಅವರನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾರೆ. ಇಬ್ಬರೂ ಮಕ್ಕಳಿಗೆ ನೇಣು ಬಿಗಿದು ಕೊಲೆ ಮಾಡಿ ನಂತರ ಪ್ರಿಯಾಂಕಾ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಿಯಾಂಕಾ ಅವರನ್ನು ರಕ್ಷಿಸಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳ ಮೃತದೇಹಗಳನ್ನು ಕೆಆರ್ ನಗರ ಸಾರ್ವಜನಿಕ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಅನಿಲ್ ಮತ್ತು ಪ್ರಿಯಾಂಕಾ ಮದುವೆಯಾಗಿ ಆರು ವರ್ಷಗಳಾಗಿದ್ದು, ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆತ್ಮಹತ್ಯೆಗೆ ಯತ್ನಿಸಿರುವ ಪ್ರಿಯಾಂಕಾ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಲಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.