LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸ್ಟೆಲ್ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಎಸೆದು ಶಾಲೆಗೆ ತೆರಳಿದ ವಿದ್ಯಾರ್ಥಿನಿ

ಕಾರವಾರ: ವಸತಿ ಶಾಲೆಯ ಹಾಸ್ಟೆಲ್ ಶೌಚಾಲಯದಲ್ಲಿ ಅಪ್ರಾಪ್ತ ಬಾಲಕಿ ಸ್ವಯಂ ಹೆರಿಗೆ ಮಾಡಿಕೊಂಡಿದ್ದಾಳೆ. ಮಗುವಿಗೆ ಜನ್ಮ ನೀಡಿದ ನಂತರ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದು ಎಂದಿನಂತೆ ಸಮೀಪದ ಶಾಲೆಗೆ ತೆರಳಿದ್ದಾಳೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ಬೆಳಗಿನ ಶಾಲಾ ಅವಧಿ ಆರಂಭವಾಗುವ ಮೊದಲು 9ನೇ ತರಗತಿ ವಿದ್ಯಾರ್ಥಿನಿ ಶೌಚಾಲಯದಲ್ಲಿ ಹೆರಿಗೆ ಮಾಡಿಕೊಂಡಿದ್ದಾಳೆ. ಕಿಟಕಿಯಿಂದ ಹೊರಗೆ ಮಗುವನ್ನು ಹೊರಗೆ ಎಸೆದಿದ್ದಾಳೆ. ಶಾಲೆಯ ಹಿಂಭಾಗದಲ್ಲಿ ಸಿಬ್ಬಂದಿ ಸ್ವಚ್ಛತೆಗೆ ತೆರಳಿದ್ದ ವೇಳೆ ಈ ಘಟನೆ ಬೆಳಕೆಗೆ ಬಂದಿದೆ. ಶಾಲೆಯ ಮುಖ್ಯಸ್ಥರು ಈ ಬಗ್ಗೆ ಪೊಲೀಸರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಆಕೆ ಗರ್ಭ ಧರಿಸಲು ಸಂಬಂಧಿ ಕಾರಣವೆಂದು ಹೇಳಲಾಗಿದೆ.

ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿನಿ ಸ್ವಯಂ ಹೆರಿಗೆ ಮಾಡಿಕೊಂಡಿದ್ದು 2.8 ಕೆಜಿ ತೂಕದ ಹೆಣ್ಣು ಮಗು ಜನಿಸಿದೆ. ಮಗುವನ್ನು ಶೌಚಾಲಯದ ಕಿಟಕಿಯಿಂದ ಹೊರಗೆ ಎಸೆದಿದ್ದು ,ಎಂದಿನಂತೆ ಸಮೀಪದ ಶಾಲೆಗೆ ತೆರಳಿದ್ದಾಳೆ. ಪರಿಶೀಲನೆಗೆ ಬಂದ ಅಧಿಕಾರಿಗಳು ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸ್ಟೆಲ್ ಗೆ ದಾಖಲಾಗಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿ ಗ್ರಾಮೀಣ ಠಾಣೆ ಪೊಲೀಸರನ್ನು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ